Menu

ಪರಾಗ್‌ ಜೈನ್‌ RAW ಮುಖ್ಯಸ್ಥರಾಗಿ ನೇಮಕ

ಐಪಿಎಸ್ ಅಧಿಕಾರಿ ಪರಾಗ್ ಜೈನ್ 2 ವರ್ಷಗಳ ಅವಧಿಗೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗ (RAW )ದ ಹೊಸ ಮುಖ್ಯಸ್ಥರಾಗಿ ನೇಮಕ ಗೊಂಡಿದ್ದಾರೆ.

ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿ ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30ರಂದು ಮುಗಿಯಲಿದ್ದು, ಆ ಸ್ಥಾನದಲ್ಲಿ ಪಂಜಾಬ್ ಕೇಡರ್‌ನ 1989ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಪರಾಗ್ ಜೈನ್ ಜುಲೈ 1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪಾಕಿಸ್ತಾನಿ ಸಶಸ್ತ್ರ ಪಡೆಗಳ ಕುರಿತು ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ‘ಆಪರೇಷನ್ ಸಿಂಧೂರ್’ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಾಯುಯಾನ ಸಂಶೋಧನಾ ಕೇಂದ್ರದ (ಎಆರ್‌ಸಿ) ಮುಖ್ಯಸ್ಥರಾಗಿ ಪರಾಗ್ ಜೈನ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪಾಕಿಸ್ತಾನ-ಭಾರತದ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಮುಖ ಕಾರ್ಯತಂತ್ರಗಳಲ್ಲಿ ಅವರು ಮಹತ್ತರ ಕೊಡುಗೆ ನೀಡಿದ್ದಾರೆ. ಪರಾಗ್ ಜೈನ್ ಈ ಹಿಂದೆ ಚಂಡೀಗಢದ ಎಸ್‌ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೆನಡಾ ಮತ್ತು ಶ್ರೀಲಂಕಾದಲ್ಲಿ ರಾಜತಾಂತ್ರಿಕ ಪಾತ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅವರು ಭಯೋತ್ಪಾದನಾ ನಿಗ್ರಹ ನಿಯೋಜನೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related Posts

Leave a Reply

Your email address will not be published. Required fields are marked *