Menu

ಇರಾನ್‌-ಇಸ್ರೇಲ್‌ ಸಂಘರ್ಷ: ದುಬೈ ವಿಮಾನ ನಿಲ್ದಾಣ ಬಳಿ ಇರಾನ್‌ ಡ್ರೋನ್‌ ದಾಳಿ

ಇರಾನ್‌-ಇಸ್ರೇಲ್‌ ಸಂಘರ್ಷದ ಭಾಗವಾಗಿ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್‌ ದಾಳಿ ಮುಂದುವರಿಸಿದ್ದು, ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್‌ಗಳನ್ನು ಸ್ಫೋಟಿಸಿದೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ವಿಮಾನ ಸಂಚಾರ ಎಂದಿನಂತೆ ಮುಂದುವರಿದಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡು ಡ್ರೋನ್‌ಗಳು ಬಿದ್ದಿದ್ದು, ಘಾನಾದ ಇಬ್ಬರು ಮತ್ತು ಒಬ್ಬ ಬಾಂಗ್ಲಾದೇಶಿ ಪ್ರಜೆಗೆ ಗಂಭೀರ ಗಾಯಗಳಾಗಿವೆ, ಭಾರತೀಯ ಪ್ರಜೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳೇ ನಮ್ಮ ಗುರಿಗಳಾಗಿವೆ ಎಂದು ಇರಾನಿನ ಜಂಟಿ ಮಿಲಿಟರಿ ಕಮಾಂಡ್ ಹೇಳಿದೆ. ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಟೆಹ್ರಾನ್‌ನಲ್ಲಿರುವ ಬ್ಯಾಂಕಿನ ಸಿಬ್ಬಂದಿ ಮೃತಪಟ್ಟ ವರದಿ ಬಳಿಕ ಇರಾನ್ ಗಲ್ಫ್ ರಾಷ್ಟ್ರಗಳ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಅನೇಕ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಗೆ ನೆಲೆಯಾಗಿರುವ ಇರಾನ್‌ ಈಗ ದುಬೈಯನ್ನು ಅಪಾಯಕ್ಕೆ ಸಿಲುಕಿಸಿದಂತಿದೆ.

ಇರಾನ್‌ಗೆ ಹೊಂದಿಕೊಂಡಿರುವ ಹರ್ಮುಜ್ ಜಲಸಂಧಿಯ ಬಳಿ ಬುಧವಾರ ಅಪರಿಚಿತ ಕ್ಷಿಪಣಿಯೊಂದು ಸರಕು ಹಡಗಿಗೆ ಡಿಕ್ಕಿ ಹೊಡೆದಿದ್ದು, ಬೆಂಕಿ ಹೊತ್ತಿಕೊಂಡಿದೆ. ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಎಇ ಕರಾವಳಿಯಲ್ಲಿ ಗುರುತಿಸಲಾಗದ ಕ್ಷಿಪಣಿಯೊಂದು ಕಂಟೇನರ್ ಹಡಗಿನ ಮೇಲೆ ದಾಳಿ ಮಾಡಿದೆ.

Related Posts

Leave a Reply

Your email address will not be published. Required fields are marked *