ಇರಾನ್- ಇಸ್ರೇಲ್ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆಯ ಬಳಿಕ ಸಂಘರ್ಷ ತೀವ್ರಗೊಂಡಿದ್ದು, ೨೧ನೇ ದಿನಕ್ಕೆ ಕಾಲಿಟ್ಟಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯ ಹೊತ್ತಿ ಉರಿಯುವ ಸ್ಥಿತಿ ನಿರ್ಮಾಣಗೊಂಡಿದ್ದು, ಭಾರತದಲ್ಲೂ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ರೂಪಾಯಿ ಮೌಲ್ಯವೂ ಕುಸಿಯುತ್ತಿದ್ದು, ಬ್ಲ್ಯಾಕ್ ಮಾರ್ಕೆಟ್ ನಿಯಂತ್ರಣಕ್ಕಾಗಿ ನಿಗಾ ವಹಿಸಲು ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ ಮಾಡಿದೆ.
ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಸೇರಿದಂತೆ ಗ್ಯಾಸ್ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗ್ಯಾಸ್ ಅನ್ನು ಅಗತ್ಯ ಸರಕುಗಳ ಕಾಯ್ದೆಗೆ ಸೇರಿಸಿದ್ದ ಸರ್ಕಾರ ಈಗ, ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದೆ. ಸೆಕ್ಷನ್ ರ ಜಾರಿಯಿಂದ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ನೈಸರ್ಗಿಕ ಅನಿಲದ ಉತ್ಪಾದನೆ, ಸಂಸ್ಕರಣೆ, ಸಂಸ್ಕರಣೆ, ಸಂಗ್ರಹಣೆ, ಆಮದು, ರಫ್ತು, ಮಾರುಕಟ್ಟೆ ಮತ್ತು ಬಳಕೆಯಲ್ಲಿ ತೊಡಗಿರುವ ಎಲ್ಲಾ ಕಂಪನಿಗಳು ಸರ್ಕಾರದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶದೊಂದಿಗೆ ನವೀಕೃತ ಡೇಟಾವನ್ನು ಹಂಚಿಕೊಳ್ಳುವುದು ಕಡ್ಡಾಯ.
ಕೊಲ್ಲಿ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿರುವುದರಿಂದ ಮಧ್ಯಪ್ರಾಚ್ಯದಲ್ಲಿನ ಕೆಲವು ವಾಯುಪ್ರದೇಶಗಳನ್ನು ತಪ್ಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯದಿಂದ ಸೂಚನೆ ನೀಡಿದೆ. ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಾಯುಪ್ರದೇಶಗಳನ್ನು ತಪ್ಪಿಸುವಂತೆ ಹಾಗೂ ಓಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶದೊಳಗೆ FL 320 ಅಥವಾ 32,000 ಅಡಿಗಳಿಗಿಂತ ಕಡಿಮೆ ಕಾರ್ಯನಿರ್ವಹಿಸದಂತೆ ಸಲಹೆ ನೀಡಲಾಗಿದೆ.


