Menu

ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?

ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ.

ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ ಮಾದರಿಗಳನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಸೋಂಕು ದೃಢಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.ವರದಿ ಬರುವವರೆಗೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿ ಮಹಿಳೆಯ ಸಂಪರ್ಕಕ್ಕೆ ಬಂದವರ ಮೇಲೂ ನಿಗಾ ವಹಿಸಿದೆ.

ಮಹಿಳೆಯನ್ನು ಉಗಾಂಡಾದ ಕ್ಯಾಂಪಾಲಾ ನಿವಾಸಿ ನಗಿರೆ ಲತೀಫಾ ಎಂದು ಗುರುತಿಸಲಾಗಿದೆ. ಮೇ 23ರಂದು ಬೆಂಗಳೂರಿಗೆ ಬಂದಿದ್ದು, ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ. ಎಬೋಲಾ ಸೋಂಕಿಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಆಕೆಯನ್ನು ಆಂಬ್ಯುಲೆನ್ಸ್ ಮೂಲಕ ನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಪ್ರತ್ಯೇಕ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಹಾಗೂ ವೈದ್ಯಕೀಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ಸೋಂಕು ಕೇವಲ ಶಂಕಿತ ಹಂತದಲ್ಲಿದ್ದು, ಪರೀಕ್ಷಾ ವರದಿ ಬರುವವರೆಗೆ ಎಬೋಲಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *