ಅಮೆರಿಕ ದಾಳಿಯ ನಂತರ ಇಸ್ರೇಲ್ ಕೂಡ ಭಾರೀ ಪ್ರಮಾಣದಲ್ಲಿ ಇರಾನ್ ಮೇಲೆ ದಾಳಿ ನಡೆಸಿದ್ದು, 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ನಡೆಸಿ 15ಕ್ಕೂ ಹೆಚ್ಚು ವಿಮಾನಗಳನ್ನು ಧ್ವಂಸಗೊಳಿಸಿದೆ.
ಭಾನುವಾರ ರಾತ್ರಿ ಭಾರೀ ಪ್ರಮಾಣದಲ್ಲಿ ವಾಯುದಾಳಿ ನಡೆಸಿದ ಇಸ್ರೇಲ್, ಇರಾನ್ನ ಇಂಧನ ಪೂರೈಕೆ ವಿಮಾನ, ಎಫ್-14, ಎಫ್-5, ಎಎಚ್-1, ಏರ್ ಕ್ರಾಫ್ಟ್ ಸೇರಿ 15 ವಿಮಾನಗಳನ್ನು ಧ್ವಂಸಗೊಳಿಸಿದ್ದಾಗಿ ಹೇಳಿಕೊಂಡಿದೆ.
ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧ 11ನೇ ದಿನಕ್ಕೆ ಕಾಲಿಟ್ಟಿದ್ದು, ಭೂಮಿಯಿಂದ ಭೂಮಿಗೆ ದಾಳಿ ನಡೆಸಬಲ್ಲ ಬಾಂಬ್ ಲಾಂಚರ್, ಕ್ಷಿಪಣಿ ಲಾಂಚರ್ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಕೂಡ ಹಾನಿಗೊಳಿಸಲಾಗಿದೆ ಎಂದು ಇಸ್ರೇಲ್ ಪ್ರಕಟಣೆಯಲ್ಲಿ ಹೇಳಿದೆ.