Menu

ಕದನ ವಿರಾಮ ಮಧ್ಯೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: ಮತ್ತೆ ಹರ್ಮುಜ್‌ ಮುಚ್ಚಿದ ಇರಾನ್‌

ಅಮೆರಿಕ- ಇರಾನ್‌ ಕದನ ವಿರಾಮದ ಮಧ್ಯೆಯೇ ಇಸ್ರೇಲ್‌ ಲೆಬನಾನ್‌ ಮೇಲೆ ದಾಳಿಗಳನ್ನು ನಡೆಸಿದ್ದು 100 ಜನರು ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿರುವ ಇರಾನ್‌ ಹರ್ಮುಜ್‌ ಜಲಸಂಧಿಯನ್ನು ಮುಚ್ಚಿದೆ.

ಲೆಬನಾನ್‌ ಮೇಲಿನ ದಾಳಿ ಮೂಲಕ ಇಸ್ರೇಲ್ ಕದನವಿರಾಮ ಉಲ್ಲಂಘನೆ ಮಾಡಿದೆ ಎಂದು ಇರಾನ್‌ ಹೇಳಿದ್ದು, ಈ ಕದನ ವಿರಾಮದಲ್ಲಿ ಲೆಬನಾನ್ ಸೇರ್ಪಡೆಯಾಗಿಲ್ಲ ಎಂದು ಅಮೆರಿಕ ಹೇಳಿತ್ತು. ಇರಾನ್ ಲೆಬನಾನ್ ಮೇಲಿನ ದಾಳಿಯನ್ನು ಖಂಡಿಸಿ ಮತ್ತೆ ಜಲಸಂಧಿಯನ್ನು ಮುಚ್ಚಿದೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕದನ ವಿರಾಮ ಒಪ್ಪಂದ ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ.

ಟ್ರಂಪ್ ಇರಾನ್ ಜೊತೆ ಕದನ ವಿರಾಮ ಘೋಷಿಸಿದ 24 ಗಂಟೆಗಳ ಒಳಗೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಕದನವಿರಾಮ ಹಿಂಪಡೆಯುವ ಎಚ್ಚರಿಕೆ ನೀಡಿದೆ.

ಇರಾನ್ ಜೊತೆ ಕದನ ವಿರಾಮ ಲೆಬನಾನ್ ಅನ್ನು ಒಳಗೊಂಡಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ವಿರುದ್ಧದ ದಾಳಿಗಳನ್ನು ಎರಡು ವಾರ ಸ್ಥಗಿತಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುತ್ತದೆ. ಇರಾನ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಅಮೆರಿಕ, ಇಸ್ರೇಲ್ ಮತ್ತು ಈ ಪ್ರದೇಶದ ದೇಶಗಳ ಮೇಲಿನ ಎಲ್ಲಾ ದಾಳಿಗಳನ್ನು ನಿಲ್ಲಿಸಲಿದೆ ಎಂದು ನೆತನ್ಯಾಹು ಪೋಸ್ಟ್ ಮಾಡಿದ್ದರು.

Related Posts

Leave a Reply

Your email address will not be published. Required fields are marked *