Menu

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ.

ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಪಾಕಿಸ್ತಾನದ ಪರ ವಕಾಲತ್ತು ವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಜನಾಕ್ರೋಶ ನೋಟಿ ಉಲ್ಟಾ ಹೊಡೆದರು. ಅಪರೇಷನ್ ಸಿಂಧೂರ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಿದ್ದಂತೆ ಟ್ವೀಟ್ ಮೂಲಕ ಶಾಂತಿ ಜಪ ಮಾಡಿ ಜನರ ಕೈಯಲ್ಲಿ ಉಗಿಸಿಕೊಂಡ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿ ಟ್ವೀಟ್ ಡಿಲೀಟ್ ಮಾಡಿತ್ತು ಎಂದು ಅಶೋಕ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಜಾಲತಾಣದಲ್ಲಿ ಕಾಶ್ಮೀರವು ಪಾಕ್‌ಗೆ ಸೇರಿದ್ದಾಗಿ ತೋರಿಸುವ ಮ್ಯಾಪ್‌ ಬಳಸಿಕೊಂಡಿದ್ದು, ಪಕ್ಷಕ್ಕೆ ತೀವ್ರ ಇರುಸು ಮುರಸು ಉಂಟು ಮಾಡಿದೆ. ಈ ಎಡವಟ್ಟು ಗಮನಕ್ಕೆ ಬರುತ್ತಿದ್ದಂತೆಯೇ ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಜಾಲತಾಣ ನಿರ್ವಹಿಸುವ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *