ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಂಗಳ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್ನಲ್ಲಿರುವ ಪೋಥಿಸ್ ಶೋ ರೂಮ್ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದೆ.
ಗಾಂಧಿನಗರದಲ್ಲಿರುವ ಪೋಥಿಸ್ ಶೋ ರೂಮ್ ಮೇಲೂ ದಾಳಿ ನಡೆದಿದೆ. ಪೋಥಿಸ್ ಮಳಿಗೆ ತಮಿಳುನಾಡು ಮೂಲದ ಉದ್ಯಮಿಗೆ ಸೇರಿದ್ದಾಗಿದ್ದು, ಚೆನ್ನೈಯಿಂದಲೇ ಐಟಿ ಅಧಿಕಾರಿಗಳು ಬಂದಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಈ ದಾಳಿ ನಡೆದಿದೆ. 50 ಐಟಿ ಅಧಿಕಾರಿಗಳ ತಂಡವು ನಗದು ವಹಿವಾಟು, ಆನ್‌ಲೈನ್ ವಹಿವಾಟು, ಮಳಿಗೆಯಲ್ಲಿರುವ ಬಟ್ಟೆಗಳು, ಮೌಲ್ಯ ಸೇರದಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಪೋಥಿಸ್ ಬಟ್ಟೆ ಶೋ ರೂಂಗಳು ಬೆಂಗಳೂರು, ತಮಿಳುನಾಡು ಸೇರಿ ಹಲವು ಕಡೆ ಇದ್ದು, ತನ್ನದೇ ಆದ ಖ್ಯಾತಿಯನ್ನು ಗಳಿಸಿಕೊಂಡಿದೆ.
ಕಾರೊಳಗೆ ಡ್ರೈವರ್ ಸೀಟಲ್ಲಿ ಕುಳಿತಿದ್ದ ಬೆಂಗಳೂರಿನ ಸೇನಾಧಿಕಾರಿ ಹೃದಯಾಘಾತಕ್ಕೆ ಬಲಿ
ಜಬಲ್‌ಪುರದ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಡ್ರೈವರ್ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಸೇನಾಧಿಕಾರಿ ಮೃತಪಟ್ಟಿದ್ದಾರೆ. ಸೇನಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ದಾರಿಹೋಕರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೇನಾ ಅಧಿಕಾರಿಗಳು ಧಾವಿಸಿ ಮೇಜರ್ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ ಹೃದಯಾಘಾತದಿಂದ ಸಾವು ಸಂಭವಿಸಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರವಾದ ಕಾರಣ ತಿಳಿದು ಬರಲಿದೆ. ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು. ಪೊಲೀಸರು ತಿಳಿಸಿದ್ದಾರೆ. ಮೇಜರ್ ವಿಜಯ್ ಕುಮಾರ್ ಮೂಲತಃ ಬೆಂಗಳೂರಿನವರಾಗಿದ್ದು, ಜಬಲ್ಪುರದ ಮಿಲಿಟರಿ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದರು.