ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಏಪ್ರಿಲ್ ೯ಕ್ಕೆ ಮುಂದೂಡಿದೆ.
ಹಾಸನ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ನಾಲ್ಕು ಪ್ರಕರಣಗಳಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಂತೆ ಆಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, ಆರೋಪಗಳು ದೃಢವಾಗಿದೆ. ಅಲ್ಲದೇ ಅತ್ಯಾಚಾರ ದೃಶ್ಯಗಳನ್ನು ಸೆರೆ ಹಿಡಿದು ಮೊಬೈಲ್ ನಲ್ಲಿದ್ದ ವೀಡಿಯೋಗಳು ನೈಜವಾಗಿವೆ ಎಂದು ಹೇಳಿತ್ತು.
ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.