ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ, ಸರಕಾರಗಳು ಜನರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿವೆ : ಶಂಕರ ಮಾಡಲಗಿ

ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ, ಸರಕಾರಗಳು ಜನರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿವೆ : ಶಂಕರ ಮಾಡಲಗಿ

ಬೈಲಹೊಂಗಲ : ಪೆಟ್ರೋಲ್, ಡಿಸೇಲ್, ಅಡುಗೆ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ, ಕಳಸಾ ಬಂಡೂರಿ ಕಾಮಗಾರಿ ಶೀಘ್ರ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಜಾತ್ಯಾತೀತ ಜನತಾದಳದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಸರಕಾರಕ್ಕೆ ಮನವಿ ಅರ್ಪಿಸಿದರು.
ಪಟ್ಟಣದ ಚನ್ನಮ್ಮಾ ಸಮಾಧಿ ಸ್ಥಳದಿಂದ ಎತ್ತಿನ ಬಂಡೆಯ ಮೂಲಕ ಪ್ರತಿಭಟನಾ ಮೆರವಣಿಗೆ ಆರಂಭಿಸಿ ತಹಶೀಲ್ದಾರ ಕಚೇರಿಯಲ್ಲಿ ಸಿಲೆಂಡರ್ ಪ್ರದರ್ಶಿಸಿ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ, ಬುಡರಕಟ್ಟಿ ಜಿ.ಪಂ.ಸದಸ್ಯ ಶಂಕರ ಮಾಡಲಾಗಿ ಮಾತನಾಡಿ, ಸರಕಾರಗಳು ಜನರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಮಹಾಮಾರಿ ಕೋವಿಡ್-೧೯ ಎರಡನೇ ಅಲೆಯಿಂದ ಕಂಗೆಟ್ಟಿರುವ ಜನರು ವ್ಯಾಪಾರ-ಉದ್ಯೋಗ ಕಳೆದುಕೊಂಡು ಆರ್ಥಿಕ ತೊಂದರೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲೆಂಡರ್, ಆಹಾರ ಧಾನ್ಯಗಳ ಬೆಲೆಗಳನ್ನು ಏರಿಕೆ ಮಾಡಿ ಮತ್ತಷ್ಟು ಸಂಕಷ್ಟ ಸಿಲುಕುವಂತೆ ಮಾಡಿದೆ. ಶೀಘ್ರದಲ್ಲಿ ಎಲ್ಲ ಬೆಲೆಗಳನ್ನು ಕಡಿಮೆ ಮಾಡಬೇಕು. ಉತ್ತರ ಕರ್ನಾಟಕದ ಪ್ರಮುಖ ಬೇಡಿಕೆಯಾಗಿದ್ದ ಕಳಸಾ-ಬಂಡೂರಿ ಯೋಜನೆಯು ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ಇಲ್ಲಿಯವರೆಗೂ ಕಾಮಗಾರಿ ಪ್ರಾರಂಭವಾಗಿಲ್ಲ. ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸುವುದಾಗಬೇಕು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೆ ೧೦ ಲಕ್ಷ ರೂ.ಪರಿಹಾರ ವಿತರಿಸಬೇಕು. ಲಾಕ್‌ಡೌನಿಂದ ರೈತರ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಬೆಳೆಯಲ್ಲಾ ನಾಶವಾಗಿ ಸಂಕಷ್ಟ ಅನುಭವಿಸುವಂತಾಗಿದೆ. ಎಲ್ಲ ರೈತ ಕುಟುಂಬಗಳಿಗೆ ೧೦ ಸಾವಿರ ಪರಿಹಾರ ವಿತರಿಸುವುದಾಗಬೇಕು.
ಜೆಡಿಎಸ್ ತಾಲೂಕಾಧ್ಯಕ್ಷರಾದ ದಾನಪ್ಪಗೌಡ ಕುಸಲಾಪೂರ, ಆನಂದ ಕಾಜಗಾರ ಮಾತನಾಡಿ, ಕೇಂದ್ರ, ರಾಜ್ಯ ಸರಕಾರಗಳು ವಿನಾಕಾರಣ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲೇಂಡರ್, ಆಹಾರ ಧಾನ್ಯಗಳ ಬೆಲೆಗಳನ್ನು ಏರಿಕೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಎಲ್ಲ ಬೆಲೆಗಳನ್ನು ಕಡಿಮೆ ಮಾಡಿ ಬಡವರಿಗೆ, ರೈತರಿಗೆ ಅನುಕೂಲ ಮಾಡಿಕೊಡವುದಾಗಬೇಕೆಂದು. ಒಂದು ವೇಳೆ ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುಭಾಷ ಬಾಗೇವಾಡಿ, ರಾಮು ರಜಪೂತ, ಆನಂದ ಪಟಾತ, ಅನೀಲ್ ದೊಡವಾಡ, ಸಂತೋಷ ಪಶುಪತಿಮಠ, ಶಿವಾನಂದ ಕುರಬೇಟ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

, , ,

Leave a Reply

Your email address will not be published. Required fields are marked *