ಜಿಲ್ಲಾ ಸುದ್ದಿ
ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38), ನಾಗಭೂಷಣ್ (36) ಹಾಗೂ ಮುರಳಿ (38) ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದ್ದು, ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ
ಮಂಡ್ಯ: ಬೈಕ್ ಅಪಘಾತದಲ್ಲಿ ದಂಪತಿ ಸಾವು
ಮಂಡ್ಯ: ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ. ಹೊಳೆನರಸೀಪುರ ತಾಲೂಕಿನ ಬಿದರಕ ಗ್ರಾಮದ ನಾಗರಾಜು (45) ಹಾಗೂ ಅವರ ಶ್ವೇತಾ (38)ಮೃತಪಟ್ಟವರು. ಕೆ.ಆರ್.ಪೇಟೆ
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ
ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆದಾಯ 155.95 ಕೋಟಿ ರೂ.
ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಹಿಂದೂ ಧಾರ್ಮಿಕ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26
ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ
ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್
“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025
ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ
ಹೊಳಲ್ಕೆರೆ ಶಾಲಾ ಬಸ್ ನಿರ್ವಾಹಕಿಯ ಕೊಲೆ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ರಾಮಘಟ್ಟ ಗ್ರಾಮದ ನಿವಾಸಿ ಆಶಾ (25)ಕೊಲೆಯಾದವರು ಎಂದು ಗುರುತಿಸಲಾಗಿದೆ. ಈಕೆ ಹೊಳಲ್ಕೆರೆಯ ಖಾಸಗಿ ಶಾಲೆಯ
ಕಾಸರಕೋಡದ ವಾಣಿಜ್ಯ ಬಂದರು ಯೋಜನೆ ಕೈಬಿಡಲು ಸಿಎಂಗೆ ಮೀನುಗಾರರ ಆಗ್ರಹ
ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡುವಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಪರಿಸರ ಸೂಕ್ಷ್ಮ ಕಡಲತೀರದ 5 ಕಿಲೋಮೀಟರ್ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪಥ ರಸ್ತೆ ಮತ್ತು