Sunday, September 13, 2026
Menu

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.  ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ

ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ

ಪತಿಯಿಂದ ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ

ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ

ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!

ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಳಗಾವಿ: ಚಳಿಗೆ ಇದ್ದಿಲು ಬೆಂಕಿ ಹಾಕಿ ಮಲಗಿದ್ದ ಮೂವರು ಯುವಕರ ಸಾವು

ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲೆಂದು ಯುವಕರು ಕೊಠಡಿಯಲ್ಲಿ ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದವರು ಹೆಣವಾಗಿ ಹೋದ ಹೃದಯವಿದ್ರಾವಕ ಘಟನೆಯೊಂದು ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಕೊರೆಯುವ ಚಳಿ ಹಾಗೂ ಸೊಳ್ಳೆಗಳ ಕಾಟದಿಂದ ಪಾರಾಗಲು ಯುವಕರು ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದರು. ರಾತ್ರಿ ದಟ್ಟ

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು

ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,