ಬೆಳಗಾವಿ
ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ ಡಿಕೆಶಿ ಹನುಮಾನ್ ನಗರದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿದರು. ಸಚಿವ ಡಾ ಎಂ ಸಿ ಸುಧಾಕರ್,
ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್
“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ
ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ
ಹುಬ್ಬಳ್ಳಿ: ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಸತೀಶ್ ಜಾರಕಿಹೊಳಿಗೆ ಕೈ ಹೈಕಮಾಂಡ್ ನೋಟಿಸ್: ನಿರಾಕರಿಸಿದ ಸುರ್ಜೇವಾಲಾ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವಿಚಾರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿರಾಕರಿಸಿದ್ದಾರೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು
ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ
ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್ಫೆಂಟ್ರಿ
ಸಿ.ಟಿ.ರವಿಯವರೇ ತನಗೆ ತಾನು ಬೆದರಿಕೆ ಪತ್ರ ಬರ್ಕೊಂಡಿರ್ಬೇಕು: ಎಂ.ಬಿ.ಪಾಟೀಲ್
ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೆದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿ, ಸಿ.ಟಿ.ರವಿ ಅವರೇ ಬೆದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ
ಸಿಂದಗಿಯಲ್ಲಿ ಚಿರತೆ ಓಡಾಟ, ಜನರಲ್ಲಿ ಆತಂಕ
ವಿಜಯಪುರ ನಗರದ ಸಿಂದಗಿ ಬೈಪಾಸ್ ಸುತ್ತಮುತ್ತ ಚಿರತೆ ಓಡಾಟ ನಡೆಸುತ್ತಿರುವುದುಉ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿನ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸುರಕ್ಷಿತ ಕ್ರಮ
ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್
ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ
ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್