Menu

Accident Deaths: ಹಿರೇಬಾಗೇವಾಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ದುರಂತ ನಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದರು. ದುರ್ಘಟನೆಯಲ್ಲಿ ಮಹಿಳೆ ಮತ್ತು ಪುರುಷ ಮೃತಪಟ್ಟಿದ್ದು, ಒಂಬತ್ತು ಜನರನ್ನು ಹಿರೇಬಾಗೇವಾಡಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಸ್ಥಳೀಯರರು ರಕ್ಷಿಸಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿ ಬಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದು, ಚಿಕಿತ್ಸೆ

ಕರ್ನಲ್‌ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ

ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ

ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ, ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಾಗರಾಜ ದ್ಯಾಮಪ್ಪ

ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು

ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ

ಬೆಳಗಾವಿಯಲ್ಲಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ಕಳವು

ಬೆಳಗಾವಿ ಜಿಲ್ಲೆಯ ಗಣೇಶಪುರದ ಲಕ್ಷ್ಮಿ ನಗರದಲ್ಲಿ ಅಪಾರ್ಟ್​ಮೆಂಟ್​ಗೆ ನುಗ್ಗಿ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಲಕ್ಷ್ಮಿ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(53) ಕೊಲೆಯಾದವರು. ಅಪಾರ್ಟ್​ಮೆಂಟ್ ಮನೆಯಲ್ಲಿ ಗಂಡ-ಹೆಂಡತಿ ಮಾತ್ರ ವಾಸವಾಗಿದ್ದರು. ಪತಿ ಅಜಿತ್ ಆಟೋ

ಶಿಕ್ಷಣದಿಂದ ಸ್ವಾಭಿಮಾನದ ಬದುಕು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಚಿಕ್ಕೋಡಿಯಲ್ಲಿ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ರ ಸಂಘದ

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,

ಐಫೋನ್ ಖರೀದಿ ತಂದೆ ಬೈದಿದ್ದಕ್ಕೆ ನೊಂದ ಮಗ ಆತ್ಮಹತ್ಯೆ

ಬೆಳಗಾವಿ: ಐಫೋನ್ ಖರೀಸಿದ್ದನ್ನು ಪ್ರಶ್ನಿಸಿ ತಂದೆ ಬೈದಿದ್ದರಿಂದ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನ್ಯೂ ವೈಭವ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ನ್ಯೂ ವೈಭವ ನಗರದ ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಆತ್ಮಹತ್ಯೆ ಮಾಡಿಕೊಂಡವರು.

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ