Menu

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಎರಡು ಮಕ್ಕಳ ತಾಯಿ

ಬೆಳಗಾವಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ. ಅಂಗೋಲ್‌ನ ಬಬಲೆ ಗಲ್ಲಿ ನಿವಾಸಿ ಆಯುರ್ವೇದ ಥೆರಾಪಿಸ್ಟ್ ಅವಿನಾಶ್ ಅಶೋಕ್ ಸುಪ್ಪಣ್ಣ (40) ಕೊಲೆಯಾದ ವ್ಯಕ್ತಿ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮನೆ ಬಳಿ ಮೊಬೈಲ್ ಫೋನ್ ಅಂಗಡಿ ಇಟ್ಟುಕೊಂಡಿರುವ ಕೈಲಾಶ್ ಬಾಲಕೃಷ್ಣ (43) ಮತ್ತು ಅವಿನಾಶ್ ಸುಪ್ಪಣ್ಣನ ಪತ್ನಿ ಲಕ್ಷ್ಮೀ

ಲವ್‌, ಸೆಕ್ಸ್‌ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ.  ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ. ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ

ಮಹಿಳೆ ಆತ್ಮಹತ್ಯೆ: ವಿಷಯ ತಿಳಿದು ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಸಾವು

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಸ್ಪತ್ರೆಗೆ ಆಗಮಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ.‌ ಮಧುರಾ ಹೊಟ್ಟೆನೋವಿನಿಂದ

ಸೈಬರ್‌ ವಂಚನೆ: 15 ಕೋಟಿ ರೂ. ಕಳೆದುಕೊಂಡ ಉದ್ಯಮಿ

ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ೧5 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್

ಹೆಣ್ಣುಮಗುವೆಂದು ವಿಷವುಣಿಸಿ ಕೊಂದ ತಂದೆಯ ಬಂಧನ

15 ದಿನದ ಹೆಣ್ಣು ಶಿಶು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿರುವುದನ್ನು ಖಚಿತಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ

ಹನಿಟ್ರಾಪ್‌ಗೆ ಕೆಡವಿ ಹಣ, ಚಿನ್ನ, ಕಾರು ದೋಚಿ ಪರಾರಿ: ಮಹಿಳೆ ಅರೆಸ್ಟ್‌

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನುಪರಿಚಯಿಸಿಕೊಂಡು ಹನಿಟ್ರಾಪ್‌ ಮಾಡಿ ಅವರಿಗೆ ಸೇರಿದ್ದ ಅಮೂಲ್ಯ ವಸ್ತುಗಳನ್ನೆಲ್ಲ ದೋಚಿ ಪರಾರಿಯಾಗುವುದನ್ನೇ ಉದ್ಯೋಗ ಮಾಡಿಕೊಂಡಿದ್ದ ಮಹಿಳೆ ದೀಪಾ ಅವಟಗಿಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ, ಲಾಡ್ಜ್​ಗೆ

ಮಗು, ಬಾಣಂತಿ ಸೇರಿ ಕುಟುಂಬವನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್‌ ಕಂಪನಿ

ಬೆಳಗಾವಿ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿ ಕಿರುಕುಳದಿಂದ ಕುಟುಂಬ ಬೀದಿಗೆ ಬಿದ್ದಿದೆ. ಕಂಪನಿಯು ಮನೆ ಸೀಜ್ ಮಾಡಿದ್ದು, ಮೂರು ತಿಂಗಳ ಮಗು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆಯುವಂತಾಗಿದೆ.

400 ಕೋಟಿ ರೂಪಾಯಿಗಳಿದ್ದ ಕಂಟೈನರ್ ಕೇಸ್‌ ಮುಚ್ಚಿ ಹಾಕುವ ಹುನ್ನಾರ?

ಕೆಲವೇ ದಿನಗಳ ಹಿಂದೆ 400 ಕೋಟಿ ರೂಪಾಯಿಗಳ ನೋಟುಗಳಿದ್ದ ಕಂಟೈನರ್ ಬಂದಿದ್ದು ಎಲ್ಲಿಂದ? ಇದರ ವಾರಸುದಾರರು ಯಾರು ? ಇದರಲ್ಲಿದ್ದ ಹಣ ಯಾರಿಗೆ ಸೇರಿದ್ದು ? ಕಂಟೈನರ್‌ನಲ್ಲಿ ಹಣವನ್ನು ರವಾನಿಸಲು ಅನುಮತಿ ಕೊಟ್ಟವರು ಯಾರು ? ಅಸಲಿಗೆ ಇದೊಂದು ಕ್ರಿಮಿನಲ್ ಕೃತ್ಯವಾಗಿದ್ದು

ಬೆಳಗಾವಿ ಅಧಿಕಾರಿಯ ಬೆಡ್‌ರೂಂ ದೃಶ್ಯ ಸೆರೆ ಹಿಡಿದು ಹಣಕ್ಕಾಗಿ ಬೆದರಿಕೆ: ನಕಲಿ ಪತ್ರಕರ್ತರು ಅರೆಸ್ಟ್‌

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ,