Saturday, January 10, 2026
Menu

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್

“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಉತ್ತರಿಸಿದರು.  ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಬೆಳಗಾವಿ

ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್

“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್‌: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್‌ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್‌ ಅಹಿಂದ ಪರ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.  ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ

ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ