ಬೆಳಗಾವಿ
ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್
ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸ್ವಚ್ಛತಾ ಓಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕೆಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನಸಾಗಿತ್ತು. ಅವರ ಕನಸನ್ನು ನನಸು ಮಾಡುವುದು
ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ
“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ
ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.
ಜಾಲಹಳ್ಳಿ ಅಂಡರ್ ಪಾಸ್: ವಿರೋಧ ಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದ ಡಿಸಿಎಂ
ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಶಿವಕುಮಾರ್ ಅವರು
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ
ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ
ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಸಿಎಂ
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ
ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ
140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್




