Saturday, November 08, 2025
Menu

ಹಳೆ ವೈಷಮ್ಯ ಶಂಕೆ: ವಿಜಯಪುರದಲ್ಲಿ ಜೋಡಿ ಕೊಲೆ

ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಕೊಲೆಯಾದವರು, ಅಪರಿಚಿತರಿಂದ ಕೊಲೆಯಾಗಿರುವುದಾಗಿ ಹೇಳಲಾಗಿದೆ. ಹತ್ಯೆ ಬಳಿಕ ಕೊಲೆಗಟುಕರು ಪರಾರಿಯಾಗಿದ್ದು, ಹಳೆಯ ವೈಷಮ್ಯದಿಂದ ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಎರಡು ವರ್ಷಗಳ ಹಿಂದೆ ತಮ್ಮೂರಿನ ಈರನಗೌಡ ಮೇಲೆ ಇಸಾಕ್ ಖುರೇಷಿ ಹಾಗೂ ಸಾಗರ ಹಲ್ಲೆ ಮಾಡಿದ್ದರು. ಕೆಲವು ದಿನ ಚಿಕಿತ್ಸೆ ಪಡೆದು

ಬಸವಕಲ್ಯಾಣದಲ್ಲಿ ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಸಾವು

ಬೀದರ್‌ನ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೊನಿಯಲ್ಲಿ ಆಟ ಆಡುವಾಗ ಬಾವಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಶೇಖ್ ನುಸ್ತಕಿಮ್ ಅಕ್ಬರಲಿ ಎಂಬ ಮಗು ಅಸು

ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್‌ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು

ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ

ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ

ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ

ತಾಳಿಕೋಟಿ ಡೋಣಿ ಸೇತುವೆ ಜಲಾವೃತ: ಬೈಕ್‌ ಸವಾರ ನೀರುಪಾಲು

ತಾಳಿಕೋಟಿ ಪಟ್ಟಣದಲ್ಲಿ ಡೋಣಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಈ ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಡೆಯಾಗಿದೆ. ಹೀಗಿದ್ದರೂ ಸೇತುವೆಯಲ್ಲಿ ಬೈಕ್‌ ಚಲಾಯಿಸಿದ ಯುವಕ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ

ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ

ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ

ಮಳಖೇಡದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ

ಬೀದರ್‌ನಲ್ಲಿ ಮಹಡಿಯಿಂದ ಮಗುವನ್ನು ತಳ್ಳಿ ಕೊಂದ ಮಲತಾಯಿ

ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಮೂರನೇ ಮಹಡಿಯಿಂದ ಏಳು ವರ್ಷದ ಮಗುವನ್ನು ತಳ್ಳಿ ಮಲತಾಯಿ ಕೊಂದಿರುವ ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ. ಆಗಸ್ಟ್ 27ರಂದು ಘಟನೆ ನಡೆದಿದ್ದು, ಶಾನವಿ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವುದಾಗಿ

ಪತ್ನಿ, ಮಕ್ಕಳು ತೊರೆದಿರುವ ನೋವು: ಮಾಂಜ್ರಾ ನದಿಗೆ ಹಾರಿದ ವ್ಯಕ್ತಿ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ಕೆಲವು ವರ್ಷದ ಹಿಂದೆ ಮಕ್ಕಳು ಮತ್ತು ಹೆಂಡತಿ ಬಿಟ್ಟು ಹೋಗಿದ್ದಕ್ಕೆ ನೊಂದಿದ್ದ ವ್ಯಕ್ತಿ ಕುಡಿತದ ಚಟಕ್ಕೆ ದಾಸನಾಗಿದ್ದು, ಬ್ರಿಡ್ಜ್‌ ಮೇಲಿಂದ ಮಾಂಜ್ರಾ ನದಿಗೆ ಹಾರಿದ್ದಾನೆ. ವ್ಯಕ್ತಿಯು ಬ್ರಿಡ್ಜ್‌ ಮೇಲಿಂದ ಮಾಂಜ್ರಾ ನದಿಗೆ