ಚಾಮರಾಜನಗರ
ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಸಿಟ್ಟಿಗೆದ್ದ ಸೋದರ ಗೆಳೆಯನ ಕೊಲೆ ಮಾಡಿರುವುದು ಗೊತ್ತಾಗಿದೆ. ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23)ಯನ್ನು ಗೆಳೆಯ ಅಜಯ್ ಕೊಲೆ ಮಾಡಿರುವುದು ಬಹಿರಂಗಗೊಂಡಿದೆ. ಗೆಳೆಯ ಅಜಯ್ ಜೊತೆ
ಎಲ್‌ಪಿಜಿ ವ್ಯತ್ಯಯ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಯುಗಾದಿಗೆ ಅನ್ನದಾಸೋಹ, ಲಾಡು ಇಲ್ಲ?
ಇರಾನ್- ಇಸ್ರೇಲ್ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಯುದ್ಧದ ಬಿಸಿ ಜಾಗತಿಕವಾಗಿ ವ್ಯಾಪಿಸುತ್ತಿದೆ. ಮಧ್ಯಪ್ರಾಚ್ಯ ಪ್ರಕ್ಷುಬ್ಧಗೊಂಡು ಪೆಟ್ರೋಲ್ ಸೇರಿದಂತೆ ತೈಲ ಪೂರೈಕೆಯಲ್ಲಿ ವ್ಯತ್ಯಯಗೊಂಡಿದೆ. ಭಾರತದಲ್ಲೂ ಎಲ್‌ಪಿಜಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದ
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಟ್ಟ ಆರೋಪಿ ಅರೆಸ್ಟ್
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಉರುಳು ಹಾಕಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ. ಆರೋಪಿಯು ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಫೆಬ್ರವರಿ 15ರಂದು ಗಂಡು
ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ
ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಗೆ ಸಿಲುಕಿ ಸಾವು, ಆರೋಪಿಗಳ ಪತ್ತೆಗೆ ಕ್ರಮ
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಹುಲಿಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸ್ಕೂಟರ್ ಕ್ಲಚ್ ವೈರ್ ಕತ್ತಿಗೆ ಸಿಕ್ಕಿ ಹಾಕಿಕೊಂಡು ಹುಲಿ ಅಸು ನೀಗಿದ್ದು, ಅರಣ್ಯ ಇಲಾಖೆ ಉರುಳು ಹಾಕಿದವರ
ಕೊಳ್ಳೇಗಾಲದಲ್ಲಿ ಹುಲಿ ಮೃತದೇಹ ಪತ್ತೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಗುಂಡಾಲ್ ಅಣೆಕಟ್ಟು ಸಮೀಪ ಹುಲಿಯ ಮೃತದದೇಹ ಪತ್ತೆಯಾಗಿದೆ. ಮಲೆ ಮಹದೇಶ್ವರ ಸಂರಕ್ಷಿತ ಅರಣ್ಯದಲ್ಲಿ ಇತ್ತೀಚೆಗೆ ಒಟ್ಟು ಐದು ಹುಲಿಗಳು ಮೃತಪಟ್ಟಿದ್ದವು. ಈಗ ಹುಲಿಯ ಸಾವಿನ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ
ಮದುವೆ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ: ವಧುವೇ ಸೂತ್ರಧಾರಿ
ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದ ವರನ ಅಡ್ಡಗಟ್ಟಿ ಚಾಕು ಇರಿದು ಗುಂಪು ಪರಾರಿಯಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈ ಕೃತ್ಯದ ರೂವಾರಿ ಆತನನ್ನು ಮದುವೆಯಾಗಬೇಕಿದ್ದ ವಧು ಎಂಬ ಸತ್ಯವನ್ನು ಬಯಲಿಗೆಳೆದಿದ್ದಾರೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ
ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ: ಸಮಗ್ರ ರಕ್ಷಣಾ ವ್ಯವಸ್ಥೆಗೆ ಡಿಕೆ ಶಿವಕುಮಾರ್ ಆದೇಶ
-ಹೇಮಂತ್ ಗೌಡ, ಕನಕಪುರ ಮಲೈ ಮಹದೇಶ್ವರ ಬೆಟ್ಟ—ಭಕ್ತಿಭಾವ, ತ್ಯಾಗ ಮತ್ತು ನಂಬಿಕೆಯ ಸಂಕೇತ. ಪ್ರತಿವರ್ಷ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಈ ಪವಿತ್ರ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಾರೆ. ಆದರೆ ಈ ಭಕ್ತಿಪೂರ್ಣ ಪಯಣದ ನಡುವೆ ಆಗಾಗ ಸಂಭವಿಸುವ
ಗುಂಡ್ಲುಪೇಟೆಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ರಾಜಶೇಖರಪ್ಪ ಚಿರತೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಗಾಯಗಳಾಗಿವೆ. ಧೈರ್ಯದಿಂದ ಚಿರತೆ ದಾಳಿಯನ್ನು ಎದುರಿಸಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಳ್ವಾಡಿ ವಿಷಪ್ರಸಾದ ಆರೋಪಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶವಿಲ್ಲ
ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಲೆ ಮಹದೇಶ್ವರ ಬೆಟ್ಟ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಇಂದಿನಿಂದ ಮುಂದಿನ




