ಚಾಮರಾಜನಗರ
ಹನೂರು ಎನ್‌ಕೌಂಟರ್: ಬಲಿಯಾದವರು ಬೇಟೆಗಾರರು ಎಂದು ಸಾಕ್ಷಿ ನೀಡಿದ ಅರಣ್ಯ ಇಲಾಖೆ
ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಪ್ರಕರಣದ ತನಿಖೆ ಮುಂದುವರಿದಿದ್ದು, ಎನ್‌ಕೌಂಟರ್‌ನಲ್ಲಿ ಸತ್ತಿರುವ ಮೂವರು ಬೇಟೆಗೆ ಹೋಗಿದ್ದವರು, ದನ ಮೇಯಿಸಲು ಹೋಗಿದ್ದವರು ಅಲ್ಲ ಎಂದು ಇಲಾಖೆ ಸಾಕ್ಷಿ ಸಮೇತ ಹೇಳಿದೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಮಾಂಸ, ಅಡುಗೆ ಸಾಮಗ್ರಿ ಚಿತ್ರ ಬಿಡುಗಡೆಗೊಳಿಸಿರುವ ಅರಣ್ಯ ಇಲಾಖೆಯು ವನ್ಯಮೃಗದ ಮಾಂಸದಲ್ಲಿ ಗುಂಡಿನ ಗುರುತು ಪತ್ತೆಯಾಗಿರುವುದಾಗಿ ತಿಳಿಸಿದೆ. ಆತ್ಮರಕ್ಷಣೆಗಾಗಿ ತಮ್ಮ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದ ಇಲಾಖೆ, ಘಟನಾ
ಹನೂರು ಎನ್‌ಕೌಂಟರ್: ಪ್ರತೀಕಾರಕ್ಕೆ ಹತ್ತು ಎಕರೆ ಅರಣ್ಯ ಭಸ್ಮ
ಹನೂರು ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿರುವುದಕ್ಕೆ ಪ್ರತೀಕಾರವಾಗಿ ಸ್ಥಳೀಯರು ಮಲೆ ಮಹದೇಶ್ವರ ವನ್ಯಜೀವಿಧಾಮದ ಹತ್ತು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಎನ್‌ಕೌಂಟರ್ ಬಳಿಕ ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರ, ಕಾವೇರಿ ಹಾಗೂ ಮಲೆ
ಹನೂರು ಶೂಟೌಟ್ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿಕೆ ಶಿವಕುಮಾರ್
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ
ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್‌ಗೈದ ಅರಣ್ಯ ಸಿಬ್ಬಂದಿ, ಸ್ಥಳೀಯರ ಆಕ್ರೋಶ
ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್‌ಕೌಂಟರ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ
ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ
“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು
ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್
“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು
ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿ ED ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು , ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಗುಂಡ್ಲು ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ
ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ
ಎಲ್‌ಪಿಜಿ ವ್ಯತ್ಯಯ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಯುಗಾದಿಗೆ ಅನ್ನದಾಸೋಹ, ಲಾಡು ಇಲ್ಲ?
ಇರಾನ್- ಇಸ್ರೇಲ್ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಯುದ್ಧದ ಬಿಸಿ ಜಾಗತಿಕವಾಗಿ ವ್ಯಾಪಿಸುತ್ತಿದೆ. ಮಧ್ಯಪ್ರಾಚ್ಯ ಪ್ರಕ್ಷುಬ್ಧಗೊಂಡು ಪೆಟ್ರೋಲ್ ಸೇರಿದಂತೆ ತೈಲ ಪೂರೈಕೆಯಲ್ಲಿ ವ್ಯತ್ಯಯಗೊಂಡಿದೆ. ಭಾರತದಲ್ಲೂ ಎಲ್‌ಪಿಜಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದ
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಟ್ಟ ಆರೋಪಿ ಅರೆಸ್ಟ್
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಉರುಳು ಹಾಕಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ. ಆರೋಪಿಯು ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಫೆಬ್ರವರಿ 15ರಂದು ಗಂಡು




