Monday, September 21, 2026
Menu

ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ

ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್‌ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ ಹಿನ್ನೆಲೆ ಸಫಾರಿ ಆರಂಭಕ್ಕೆ ಒತ್ತಾಯ ಕೇಳಿಬಂದಿತ್ತು. ಈಗ ಸರ್ಕಾರ ಸಫಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿ, ಹೋರಾಟದ ಎಚ್ಚರಿಕೆ

ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಗೆ ಸಿಲುಕಿ ಸಾವು, ಆರೋಪಿಗಳ ಪತ್ತೆಗೆ ಕ್ರಮ

ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಹುಲಿಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸ್ಕೂಟರ್ ಕ್ಲಚ್ ವೈರ್ ಕತ್ತಿಗೆ ಸಿಕ್ಕಿ ಹಾಕಿಕೊಂಡು ಹುಲಿ ಅಸು ನೀಗಿದ್ದು, ಅರಣ್ಯ ಇಲಾಖೆ ಉರುಳು ಹಾಕಿದವರ

ಕೊಳ್ಳೇಗಾಲದಲ್ಲಿ ಹುಲಿ ಮೃತದೇಹ ಪತ್ತೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಗುಂಡಾಲ್‌ ಅಣೆಕಟ್ಟು ಸಮೀಪ ಹುಲಿಯ ಮೃತದದೇಹ ಪತ್ತೆಯಾಗಿದೆ. ಮಲೆ ಮಹದೇಶ್ವರ ಸಂರಕ್ಷಿತ ಅರಣ್ಯದಲ್ಲಿ ಇತ್ತೀಚೆಗೆ ಒಟ್ಟು ಐದು ಹುಲಿಗಳು ಮೃತಪಟ್ಟಿದ್ದವು. ಈಗ ಹುಲಿಯ ಸಾವಿನ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ

ಮದುವೆ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ: ವಧುವೇ ಸೂತ್ರಧಾರಿ

ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದ ವರನ ಅಡ್ಡಗಟ್ಟಿ ಚಾಕು ಇರಿದು ಗುಂಪು ಪರಾರಿಯಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈ ಕೃತ್ಯದ ರೂವಾರಿ ಆತನನ್ನು ಮದುವೆಯಾಗಬೇಕಿದ್ದ ವಧು ಎಂಬ ಸತ್ಯವನ್ನು ಬಯಲಿಗೆಳೆದಿದ್ದಾರೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ

ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ: ಸಮಗ್ರ ರಕ್ಷಣಾ ವ್ಯವಸ್ಥೆಗೆ ಡಿಕೆ ಶಿವಕುಮಾರ್ ಆದೇಶ

-ಹೇಮಂತ್ ಗೌಡ, ಕನಕಪುರ ಮಲೈ ಮಹದೇಶ್ವರ ಬೆಟ್ಟ—ಭಕ್ತಿಭಾವ, ತ್ಯಾಗ ಮತ್ತು ನಂಬಿಕೆಯ ಸಂಕೇತ. ಪ್ರತಿವರ್ಷ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು  ಪಾದಯಾತ್ರೆಯ ಮೂಲಕ ಈ ಪವಿತ್ರ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಾರೆ. ಆದರೆ ಈ ಭಕ್ತಿಪೂರ್ಣ ಪಯಣದ ನಡುವೆ ಆಗಾಗ  ಸಂಭವಿಸುವ

ಗುಂಡ್ಲುಪೇಟೆಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ರಾಜಶೇಖರಪ್ಪ ಚಿರತೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಗಾಯಗಳಾಗಿವೆ. ಧೈರ್ಯದಿಂದ ಚಿರತೆ ದಾಳಿಯನ್ನು ಎದುರಿಸಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ವಾಡಿ ವಿಷಪ್ರಸಾದ ಆರೋಪಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶವಿಲ್ಲ

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಲೆ ಮಹದೇಶ್ವರ ಬೆಟ್ಟ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಇಂದಿನಿಂದ ಮುಂದಿನ

ಬೇರೆ ಜಾತಿಯವನೊಂದಿಗೆ ಮಗಳ ಮದುವೆ: ಚಾಮರಾಜನಗರದಲ್ಲಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಬೇರೆ ಜಾತಿ ಯುವನೊಂದಿಗೆ ಮಗಳ ಮದುವೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬವರ ಕುಟುಂಬನ್ನು ಬಹಿಷ್ಕರಿಸಲಾಗಿದೆ. ಈ ಬಹಿಷ್ಕಾರ ತೆರವಾಗಬೇಕಾದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ.

ಕರ್ತವ್ಯ ಮುಗಿಸಿ ಮನೆಗೆ ಹೋದ ಎಎಸ್‌ಐ ಕುಸಿದು ಸಾವು

ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಬಂದ ಎಎಸ್‌ಐವೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟವರು. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಚಾಮರಾಜ ನಗರದ ಪೊಲೀಸ್ ಗೃಹಕ್ಕೆ ಬೆಳಗ್ಗೆ

ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್‌

ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್‌ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ.