ಚಿಕ್ಕಬಳ್ಳಾಪುರ
ಎರಡು ಮಕ್ಕಳ ತಾಯಿ ಪ್ರೇಯಸಿಯನ್ನು ಕೊಲೆಗೈದ ಮೂರು ಮಕ್ಕಳ ತಂದೆ ಪ್ರಿಯಕರ
ವಿವಾಹಿತ ಪ್ರೇಯಸಿಯನ್ನು ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನಲ್ಲಿ ನಡೆದಿದೆ. ಚೇಳೂರು ತಾಲೂಕಿನ ಗರಿಗಿರೆಡ್ಡಿ ಪಾಳ್ಯದಲ್ಲಿ ಸಲ್ಮಾ ಎಂಬಾಕೆಯನ್ನು ಬಾಬಾಜಾನ್ ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಅಲ್ಲಿಂದ ಚೇಳೂರಿನ ತನ್ನ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಲ್ಮಾಗೆ ಗಂಡ ಮತ್ತು ಗಂಡ ಇಬ್ಬರು ಮಕ್ಕಳಿದ್ದು, ಕಳೆದ ಆರು ವರ್ಷಗಳಿಂದ ಬಾಬಾಜಾನ್ ಜೊತೆ ಸಂಬಂಧದಲ್ಲಿದ್ದಳು. ಬಾಬಾಜಾನ್‌ಗೂ ಮದುವೆಯಾಗಿ ಮೂವರು ಮಕ್ಕಳಿದ್ದು, ಹೆಂಡತಿ ಮಕ್ಕಳು
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ರಾಜೀವ್ ಗೌಡ ಬೆದರಿಕೆ: ಎಫ್ಐಆರ್ ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಆದೇಶ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ರಾಜೀವ್ ಗೌಡ ಮತ್ತಷ್ಟು
ಪ್ರೀತಿಸಿ ಮನೆ ತೊರೆದು ಮದುವೆ: ಪೊಲೀಸ್ ಠಾಣೆಯಲ್ಲಿ ಯುವಕನ ವಂಚನೆ ಬಯಲು, ತಾಳಿ ಕಿತ್ತೆಸೆದ ಯುವತಿ
ಚಿಕ್ಕಬಳ್ಳಾಪುರದಲ್ಲಿ ಮನೆಯವರನ್ನು ತೊರೆದು ಪ್ರೀತಿಸಿ ಮದುವೆಯಾದ ಯುವತಿ ಪೊಲೀಸ್ ಠಾಣೆಯಲ್ಲಿ ತಾಳಿ ಕಿತ್ತೆಸೆದು ಪೋಷಕರ ಜೊತೆ ಹೋಗಿರುವ ಘಟನೆ ನಡೆದಿದೆ. ಪ್ರೀತಿಸಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ
ಆನ್‌ಲೈನ್‌ನಲ್ಲಿ ಪಾರ್ಟ್ ಟೈಂ ಕೆಲಸ ಹುಡುಕಾಡಿ 12 ಲಕ್ಷ ರೂ.ಕಳಕೊಂಡ ಚಿಕ್ಕಬಳ್ಳಾಪುರ ನರ್ಸ್
ಅಂತರ್ಜಾಲದಲ್ಲಿ ಪಾರ್ಟ್ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಚಿಕ್ಕಬಳ್ಳಾಪುರದ ನರ್ಸ್‌ವೊಬ್ಬರು ಆನ್ಲೈನ್ ವಂಚನೆಗೆ ಒಳಗಾಗಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸ ಹೋಗಿದ್ದು ತಿಳಿದುಕೊಂಡ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ
ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ
ಚಿಕ್ಕಬಳ್ಳಾಪುರ: ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ
ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ
ಚಿಕ್ಕಬಳ್ಳಾಪುರ: ಕಾರಲ್ಲಿ ಬಂದು ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಉದ್ಯಮಿಯ 55 ಲಕ್ಷ ರೂ. ಇದ್ದ ಬ್ಯಾಗ್ ದರೋಡೆ
ಹೈದರಾಬಾದ್‌ನ ಉದ್ಯಮಿಯೊಬ್ಬರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ 55 ಲಕ್ಷ ರೂಪಾಯಿ ಇದ್ದ ಅವರ ಹಣದ ಬ್ಯಾಗ್ ಅನ್ನು ಕಳ್ಳ ದೋಚಿಕೊಂಡು ಹೋಗಿದ್ದಾನೆ. ಉದ್ಯಮಿ ಬೆಂಗಳೂರಿನಲ್ಲಿ ಮನೆ ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಎಗರಿಸಿ
ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ
2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್
ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ
ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.




