Menu
12

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ

ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಕೊಪ್ಪ, ಎನ್​.ಆರ್.ಪುರ

ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್‌ ಬಂದೋಬಸ್ತ್‌

ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್​ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್​ಡಿ ಕಾಣಿಸಿಕೊಂಡಿದ್ದು,

ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ

ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ