ಚಿಕ್ಕಮಗಳೂರು
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಂಚಕರು ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ. ವಾಟ್ಸಾಪ್ನಲ್ಲಿ ಬಂದ ಅದರ ಲೋಗೋ ನಂಬಿ ಶಂಕರ್ ನಟರಾಜನ್
ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ
ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,
ಕಡೂರಿನಲ್ಲಿ ಪೋಷಕರೆದುರೇ ಮಗುವನ್ನು ಹೊತ್ತೊಯ್ದ ಚಿರತೆ: ಗುಡ್ಡದಲ್ಲಿ ಶವ ಪತ್ತೆ
ಕಡೂರು ತಾಲೂಕಿನ ನವಿಲೇಕಲ್ ಪ್ರದೇಶದಲ್ಲಿ ಚಿರತೆಯು ಪೋಷಕರೆದುರೇ ಮಗುವನ್ನು ಹೊತ್ತೊಯ್ದಿದ್ದು, ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಚಿರತೆಯು ಐದು ವರ್ಷದ ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದಾಗ ಚೀರಾಟ ಕೇಳಿ ಪೋಷಕರು ಬಂದಿದ್ದಾರೆ.
ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದ ಬಿಇ ವಿದ್ಯಾರ್ಥಿ ಸಾವು
ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ ಮೂಲದ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ವರುಣ್ ದೇಸಾಯಿ
ಚಿಕ್ಕಮಗಳೂರು: ಮದ್ಯಪಾನ ಮಾಡಿ ಪೋಷಕರಿಗೆ ಹೆದರಿದ ಬಾಲಕ ಆತ್ಮಹತ್ಯೆ
ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮೇಲ್ಪಾಲ್ ಸಮೀಪದ ಗಂಗೋಜಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕನೊಬ್ಬ ಅಲ್ಲಿ ಮದ್ಯಪಾನ ಮಾಡಿಕೊಂಡು ಬಂದಿದ್ದು, ಈ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂಬ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ರೈತರಿಬ್ಬರು ಬಲಿ
ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಮೃತಪಟ್ಟ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಕೊಟ್ಟಿಗೆಗೆ ಸೊಪ್ಪು ತರಲೆಂದು ಇಬ್ಬರೂ ಕಾಡಿಗೆ ಹೋಗಿದ್ದಾಗ ಆನೆ ದಾಳಿ ನಡೆಸಿ ಈ ದುರಂತ ಸಂಭವಿಸಿದೆ.
ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ
ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು
ಮೂಡಿಗೆರೆ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಯುವತಿ ಸಾವು
ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ
ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ




