Monday, September 21, 2026
Menu

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶಿವಮೊಗ್ಗದಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಕಳೆದ ಭಾನುವಾರ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸವೀರಾಪುರ ಗ್ರಾಮದ ಮಂಜುಳಾ

ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್‌ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ

ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.

ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ

ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಕೇರಳ ಬಾಲಕಿ ಶ್ರೀನಂದಾ ಮೃತದೇಹ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. 40 ಜನರ ಪ್ರವಾಸಿ ತಂಡದಲ್ಲಿ ಕುಟುಂಬದೊಂದಿಗೆ ಚಾರಣಕ್ಕೆ ಬಂದಿದ್ದ ಆಕೆ

ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ: ಮೂಡಿಗೆರೆಯಲ್ಲಿ ಪತಿ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದು, ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿ 10 ದಿನ ಕಳೆದಿದ್ದಾರೆ. ಪತಿ ಸತ್ತಿರುವುದೇ ಪತ್ನಿಗೆ ತಿಳಿದಿಲ್ಲ. 77 ವರ್ಷದ ಸಿರಿಲ್ ಮೋನಿಸ್ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಮಾನಸಿಕ ಅಸ್ವಸ್ಥ ಪತ್ನಿಯು ಪತಿ

ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ  ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು

ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ

ಮದುವೆಯಾಗುತ್ತಿಲ್ಲವೆಂದು ನೊಂದ ಕಡೂರು ಕುರಿಗಾಹಿ ಯುವಕ ಸುಸೈಡ್‌

ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟವರು. ಕಡೂರು

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್‌ ಯುವತಿ ಸುಸೈಡ್‌

ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನಾಗಾಲ್ಯಾಂಡ್‌ನ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು