ಚಿಕ್ಕಮಗಳೂರು
ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು ಸ್ಥಳೀಯರು ಹೇಳಿದ್ದರು. ಆದರೂ ಕಾಮಗಾರಿ ನಡೆಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಇದೇ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಅಂದಿನ ನಗರಸಭೆ ಅಧ್ಯಕ್ಷರು ಹಾಗೂ ನಗರಸಭೆ ಅಧಿಕಾರಿಗಳು ಭರವಸೆ ನೀಡಿದ್ದರು.
ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ



