Menu

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ತಂದ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ ಸೇರಿ ಒಟ್ಟು ರೂ. ೪ ಲಕ್ಷಗಳು, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. ೨ ಲಕ್ಷಗಳವರೆಗೆ ಜೊತೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ. ೧ ಲಕ್ಷಗಳವರೆಗೆ ಹಾಗೂ

ಕೆಮ್ಮಣ್ಣುಗುಂಡಿಯಲ್ಲಿ ಪತ್ನಿ ಜೊತೆ ಸೆಲ್ಫಿ: ಕಾಲು ಜಾರಿ ಕಂದಕಕ್ಕೆ ಬಿದ್ದು ಪತಿ ಸಾವು

ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಗಂಡ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಶಿಕ್ಷಕರಾಗಿದ್ದ ಸಂತೋಷ್ (40) ಮೃತಪಟ್ಟವರು. ಸಂತೋಷ್ ಮತ್ತು ಹೆಂಡತಿ ಶ್ವೇತ ಕೆಮ್ಮಣ್ಣುಗುಂಡಿ ನೋಡಲು ಬಂದಿದ್ದರು. ಕೆಮ್ಮಣ್ಣುಗುಂಡಿ

ಕೊಪ್ಪದಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕೊಪ್ಪ ತಾಲೂಕು ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್‌ ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ. ಬೆಳಿಗ್ಗೆ

ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು

ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ

ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ

ಜೈಲಿನಲ್ಲಿ ಜಾಮರ್‌: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ

ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್‌ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ

ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ

ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್‌ ಬಂದೋಬಸ್ತ್‌

ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ