ಚಿಕ್ಕಮಗಳೂರು
ಮೂಡಿಗೆರೆ ಹೋಂಸ್ಟೇ ಬಾತ್ರೂಮ್ನಲ್ಲಿ ಕುಸಿದು ಬಿದ್ದು ಯುವತಿ ಸಾವು
ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್ರೂಮ್ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ ಘಟನೆ ನಡೆದಿದ್ದು, ಸಾವಿನ ಹಿಂದಿನ ನಿಖರ ಕಾರಣಗಳು ಇನ್ನೂ ಬಹಿರಂಗಗೊಂಡಿಲ್ಲ. ಪೊಲೀಸರು ಪ್ರಕರಣದಲ್ಲಿ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ರಂಜಿತಾ ಎಂಎಸ್ಸಿ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ
ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ
ಚಿಕ್ಕಮಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ರುದ್ರ ನಿಯೋಜನೆ
ಮಾದಕ ದ್ರವ್ಯ ಪತ್ತೆ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನ ದಳಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ. ವಿಶೇಷ ತರಬೇತಿ ಪಡೆದ ‘ರುದ್ರ’ ಹೆಸರಿನ ಶ್ವಾನ ಅಧಿಕೃತವಾಗಿ ಜಿಲ್ಲೆಯ ಪೊಲೀಸ್ ಕರ್ತವ್ಯದ ಭಾಗವಾಗಿದೆ. 21 ಆಗಸ್ಟ್ 2024ರಂದು ಜನಿಸಿದ ರುದ್ರ ಶ್ವಾನವು ಬೆಂಗಳೂರಿನ
ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ. ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್
ವರ್ಕ್ಫ್ರಮ್ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ
ಆನ್ಲೈನ್ನಲ್ಲಿ ವರ್ಕ್ಫ್ರಮ್ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಟೆಲಿಗ್ರಾಂ ಆ್ಯಪ್ ಮೂಲಕ ‘ವರ್ಕ್ಫ್ರಮ್ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್ ಕ್ಲಿಕ್ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್ ಕ್ಲಿಕ್
ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ
ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ತಂದ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ
ಕೆಮ್ಮಣ್ಣುಗುಂಡಿಯಲ್ಲಿ ಪತ್ನಿ ಜೊತೆ ಸೆಲ್ಫಿ: ಕಾಲು ಜಾರಿ ಕಂದಕಕ್ಕೆ ಬಿದ್ದು ಪತಿ ಸಾವು
ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಗಂಡ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಶಿಕ್ಷಕರಾಗಿದ್ದ ಸಂತೋಷ್ (40) ಮೃತಪಟ್ಟವರು. ಸಂತೋಷ್ ಮತ್ತು ಹೆಂಡತಿ ಶ್ವೇತ ಕೆಮ್ಮಣ್ಣುಗುಂಡಿ ನೋಡಲು ಬಂದಿದ್ದರು. ಕೆಮ್ಮಣ್ಣುಗುಂಡಿ
ಕೊಪ್ಪದಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರಿನ ಕೊಪ್ಪ ತಾಲೂಕು ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ. ಬೆಳಿಗ್ಗೆ
ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ
ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು
ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ
ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ




