ಚಿತ್ರದುರ್ಗ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49) ಕೊಲೆಯಾದವರು ಎಂದು ಗುರುತಿಸಲಾಗಿದೆ. ಶಿವಮೂರ್ತಿ ಪಾವಗಡದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದರು, ರಜೆ ದಿನಗಳಲ್ಲಿ ಕಾರು ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು. ಜೂನ್ 26ರಂದು ಕಾರು
ಭದ್ರಾ ಮೇಲ್ದಂಡೆ ಯೋಜನೆ 2028ಕ್ಕೆ ಪೂರ್ಣ, ಆಗಸ್ಟ್‌ನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು
ಚಳ್ಳಕೆರೆ ಮತದಾರರ ಗುರುತಿನ ಚೀಟಿಯಲ್ಲಿ ಪಡಿತರ ಚೀಟಿ ಫೋಟೊ: ಸಾರ್ವಜನಿಕರ ಆಕ್ರೋಶ
ಚಳ್ಳಕೆರೆಯಲ್ಲಿ ಮತದಾರರ ಗುರುತಿನ ಚೀಟಿಯಲ್ಲಿ ಮತದಾರನ ಭಾವಚಿತ್ರದ ಬದಲು ಪಡಿತರ ಚೀಟಿಯಲ್ಲಿನ ಕುಟುಂಬದ ಫೋಟೊ ಮುದ್ರಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಚಳ್ಹಳಕೆರೆ ಳೇ ಟೌನ್ ನಿವಾಸಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಗುರುತಿನ ಚೀಟಿ ಪಡೆಯುವ
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಚಿತ್ರದುರ್ಗದಲ್ಲಿ ಕಾರು ಟೈರ್ ಸ್ಫೋಟಗೊಂಡು ಐವರ ಸಾವು
ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಮೃತಪಟ್ಟವರು.
ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ
ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ
ಚಳ್ಳಕೆರೆಯಲ್ಲಿ ಶಿಕ್ಷಕನಿಂದ ಅತ್ಯಾಚಾರ, ಬಾಲಕಿಗೆ ಗರ್ಭಪಾತ: ಶಿಕ್ಷಕ, ವೈದ್ಯೆ ವಿರುದ್ಧ ಪೋಕ್ಸೊ ದಾಖಲು
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ
ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ
ಬೆಸ್ಕಾಂ ಚಿತ್ರದುರ್ಗ ವ್ಯಾಪ್ತಿಯಲ್ಲಿ ನಾಳೆಯಿಂದ ಮಾರ್ಚ್ 25ರ ವರೆಗೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವ್ಯಾಪ್ತಿಯ ಚಿತ್ರದುರ್ಗ ಮತ್ತು ಕೋಲಾರ ಸೇರಿ ಹಲವೆಡೆ ನಾಳೆಯಿಂದ ಮಾರ್ಚ್ 25ರ ವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳುತ್ತಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಿರ್ವಹಣಾ ಕಾಮಗಾರಿಗಳು ಮತ್ತು ಹೆಚ್‌ಟಿ ರೀಕಂಡಕ್ಟರಿಂಗ್ ಕಾರಣ
ಗಂಡ ಹೆಂಡತಿ ಜಗಳ ಬಿಡಿಸಲು ಹೋದಾತ ಮಚ್ಚಿನೇಟಿಗೆ ಬಲಿ
ಕೌಟುಂಬಿಕ ಕಲಹದ ಹಿನ್ನೆಲೆ ಗಂಡ ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನೇಟು ಬಿದ್ದು ಪ್ರಾಣ ಹೋಗಿರುವ ಘಟನೆ ಚಿತ್ರದುರ್ಗದ ಬುದ್ಧ ವೃತ್ತದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸ್ಟೇಡಿಯಂ ರಸ್ತೆಯಲ್ಲಿನ ಬುದ್ಧ ವೃತ್ತದಲ್ಲಿ ಸಾಧಿಕ್‌ವುಲ್ಲಾ ಎಂಬಾತ ಪತ್ನಿಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿದ್ದ.




