ದಾವಣಗೆರೆ
ಮದುವೆಯಾಗಿ ಎರಡು ತಿಂಗಳಿಗೆ ಬೇರೆಯವನ ಜೊತೆ ಪತ್ನಿ ಎಸ್ಕೇಪ್: ದಾವಣಗೆರೆಯಲ್ಲಿ ಪತಿ ಸುಸೈಡ್
ಮದುವೆಯಾಗಿ ಎರಡು ತಿಂಗಳಾಗಿದ್ದು, ಪತ್ನಿ ಬೇರೊಬ್ಬನ ಜತೆ ಪರಾರಿಯಾಗಿದ್ದಕ್ಕೆ ನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (32) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದು, ಹೆಂಡತಿ ಬೇರೊಬ್ಬನ ಜೊತೆ ಹೋಗಿರುವುದನ್ನು ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕ ಕಾರಣ ಎಂದು ಆರೋಪಿಸಿದ್ದಾರೆ. ಪತ್ನಿಯು ನನ್ನ ಮೇಲೆ ಇಲ್ಲ
ಆನಗೋಡು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವು
ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ನಿಗೂಢವಾಗಿ ಮೃತಪಟ್ಟಿವೆ. ಮೂರು ದಿನಗಳಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ಮೃತಪಟ್ಟಿದ್ದು, ಮೃಗಾಯಲದಲ್ಲಿ ಹೆಮರಾಜಿಕ್ ಸೆಫ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಹರಡಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಮೃಗಾಲಯದಲ್ಲಿ
2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸತೀಶ್ ಜಾರಕಿಹೊಳಿ
ಜನರು ಅಭಿಮಾನದಿಂದ ಮುಂದಿನ ಸಿಎಂ ಅಂತ ಘೋಷಣೆ ಕೂಗ್ತಾರೆ, ಆದರೆ ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನ ಅವರ ಅಭಿಮಾನಕ್ಕಾಗಿ
ಸಾಲಕ್ಕೆ ಹೆದರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಮಾಜಿ ಕಾರ್ಪೋರೇಟರ್ ಸಜೀವ ದಹನ
ಸಾಲದ ಬವಣೆಯಿಂದ ಕಂಗೆಟ್ಟ ದಾವಣೆಗೆರೆಯ 43ನೇ ವಾರ್ಡ್‌ನ ಬಿಜೆಪಿ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಅದರಲ್ಲೇ ಕುಳಿತುಕೊಂಡು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಅವರ ಶವ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ
ದಾವಣಗೆರೆಯಲ್ಲಿ ಬೈಕ್‌ಗೆ ಗುದ್ದಿದ ಅಪರಿಚಿತ ವಾಹನ: ಸವಾರ ಸಾವು
ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತಪಟ್ಟ ಯುವಕ. ಗದಗ ಶಿಂಗ್ಲಿ ಗ್ರಾಮದ ಮಂಜುನಾಥ ಬೈಕ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ
ದಾವಣಗೆರೆಯ ಸರ್ವತೋಮುಖ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ: ಸದನದಲ್ಲಿ ಸಂತಾಪ ಸಲ್ಲಿಸಿದ ಸಿಎಂ
ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ
ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ
ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ.
ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ
ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ
ದಾವಣಗೆರೆ ಆಸ್ಪತ್ರೆ ಆವರಣದಲ್ಲಿ ಕುಸಿದು ಪುರಸಭೆ ಅಧ್ಯಕ್ಷ ಸಾವು
ದಾವಣಗೆರೆ ಆಸ್ಪತ್ರೆಯ ಆವರಣದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಪುರಸಭೆ ಅಧ್ಯಕ್ಷ ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಮೃತಪಟ್ಟವರು. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಿನ ಜಾವ ಹನುಮಂತಪ್ಪ ಆಸ್ಪತ್ರೆಗೆ ತೆರಳಿದ್ದರು. ಒಬ್ಬರೇ ಬೈಕ್ ನಲ್ಲಿ ತೆರಳಿದ್ದ ಹನುಮಂತಪ್ಪ
ಪೋಕ್ಸೋ: 2ನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ
ಪೋಕ್ಸೋ ಎರಡನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆಗೊಂಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೊಲೀಸರು A&B ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ಎರಡನೇ ಸಂತ್ರಸ್ತೆಯ ಚಾರ್ಜಶೀಟ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಉಲ್ಲೇಖಗೊಂಡಿರುವ ದಿನಾಂಕದಂದು ಮಠದ ಮಾಜಿ ಪೀಠಾಧಿಪತಿ




