ಹಾಸನ
ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ. ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ ವೈ.ಡಿ ಸಾವಿತ್ರಮ್ಮ (64) ತವರೂರು ಯಳವಾರೆ ಗ್ರಾಮದ ಮಗಳ ಮನೆಯಲ್ಲಿ ಹೃದಯಾಘಾತದಿಂದ ಅಸು ನೀಗಿದ್ದರು. ಮೃತ ವೈ.ಡಿ ಸಾವಿತ್ರಮ್ಮ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯಳವಾರೆ ಗ್ರಾಮದಿಂದ ಜಾವಗಲ್
ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ
ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್
ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು
ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ತಡೆದು ರೌಡಿಯ ಹುಚ್ಚಾಟ
ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ
ಹೊಳೆನರಸೀಪುರದಲ್ಲಿ ರೈಲಿಂದ ನದಿಗೆ ಬಿದ್ದ ವಿದ್ಯಾರ್ಥಿ
ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೊಬ್ಬ ನದಿಗೆ ಬಿದ್ದಿದ್ದಾನೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮುಜಾಮಿಲ್ ನದಿಗೆ ಬಿದ್ದ ವಿದ್ಯಾರ್ಥಿ. ವಿದ್ಯಾಥಿ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್
ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ
ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.
ಹಾಸನದಲ್ಲಿ ವ್ಯಕ್ತಿಯ ಸಾಯಿಸಿ ಶವ ಮುಚ್ಚಿಟ್ಟ ಕಾಡಾನೆ
ಹಾಸನದ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ಕಾಡಾನೆಯೊಂದು ವೃದ್ಧರೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಲ್ಲದೆ ಶವದ ಮೇಲೆ ಕಾಫಿ ಗಿಡಗಳನ್ನು ಮುಚ್ಚಿಟ್ಟು ಹೋಗಿರುವುದು ಪತ್ತೆಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಗ್ಗೆ ಗ್ರಾಮದಿಂದ ಅಡಿಬೈಲು
ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ
ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ
ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ
ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು
ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!
ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ