ಹಾಸನ
ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ
ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್ ಎಂಬವರ ಮೇಲೆ ಮಹಿಳಾ ಕಾನ್ಸ್‌ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ಮೇಲೆ ಗೋವಿನಹಳ್ಳಿ ಮೂರ್ತಿ ಕೆರಲೂರು ಗ್ರಾಮದ ಪರಮೇಶ ಎಂಬವರು ಹಲ್ಲೆ ಮಾಡಿ ಹಾಗೂ ಜೀವ ಬೆದರಿಕೆ ಹಾಕಿದ್ದರು ಎಂದು ಪ್ರಕಾಶ ಬೇಲೂರು ಪೊಲೀಸ್ ಠಾಣೆಗೆ
ಪತಿ ಮನೆಯವರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಮಗು ಕೊಂದು ಆತ್ಮಹತ್ಯೆ
ಪತಿ ಮನೆಯವರು ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದಕ್ಕೆ ನೊಂದ ಮಹಿಳೆ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಆಲೂರು ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಳು ಮತ್ತು ಮಗುವಿನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಮಗು ಆರ್ಯನ್
ಹಾಸನದಲ್ಲಿ ಸರ ಕಸಿಯಲು ಯತ್ನಿಸಿದವನಿಗೆ ಸಾರ್ವಜನಿಕರಿಂದ ಥಳಿತ
ಕುತ್ತಿಗೆಗೆ ಹಾಕಿದ್ದ ಚಿನ್ನದ ಸರವನ್ನು ಕಸಿಯಲು ಹೋಗಿ ಸಾರ್ವಜನಿಕರಿಂದ ಗೂಸಾ ತಿಂದ ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಗಗನ್ (31) ಚಿನ್ನ ಕದಿಯಲು ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿ. ಪಟ್ಟಣದ ಬಿ.ಎಮ್ ರಸ್ತೆಯಲ್ಲಿರುವ ಕಿಂಗ್ಸ್ ಕಂಫರ್ಟ್ ಎಂಬ ಅತಿಥಿ
ಹಾಸನದಲ್ಲಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಅನೈತಿಕ ಸಂಬಂಧ ಅನುಮಾನದಿಂದ ವ್ಯಕ್ತಿಯು ಪತ್ನಿಯನ್ನು ಹತ್ಯೆ ಮಾಡಿ ಸಂಬಂಧಿಕರಿಗೆ ವೀಡಿಯೊ ಕಾಲ್ ಮಾಡಿ ತಿಳಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ
ಸರ್ಕಾರಿ ಗೌರವಗಳೊಂದಿಗೆ ಮಾವಿನಕೆರೆಯಲ್ಲಿ ಇಂದು ಚನ್ನಮ್ಮ ಅಂತ್ಯಕ್ರಿಯೆ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ಅಂತ್ಯ ಸಂಸ್ಕಾರ ಇಂದು ( ಸೋಮವಾರ) ಮಧ್ಯಾಹ್ನ ಹರದನಹಳ್ಳಿಯ ಮಾವಿನಕೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಮಾವಿನಕೆರೆಯಲ್ಲಿ 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ಹಲವು ಜನಪ್ರತಿನಿಧಿಗಳು
ಹಾಸನ ಚನ್ನಕೇಶವನ ಹುಂಡಿ ಎಣಿಕೆ: ಹಣ ಕದ್ದ ವೀಡಿಯೊಗ್ರಾಫರ್
ಹಾಸನದಲ್ಲಿ ಚನ್ನಕೇಶವ ದೇವಾಲಯದ ಹುಂಡಿ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪದಡಿ ಪೊಲೀಸರು ವಿಡಿಯೋಗ್ರಾಫರ್ ನೀಲಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹುಂಡಿಕ ಎಣಿಕೆ ವೇಳೆ ವಿಡಿಯೋಗ್ರಾಫರ್ ಹಣ ಕದ್ದ ಆರೋಪವಿದ್ದು, ಇದರ ಹಿಂದೆ ಅಧಿಕಾರಿಗಳ ಪಾತ್ರ ಇದೆಯಾ
ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ
ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಉದ್ಯಮಿ ಎಲ್. ಟಿ. ಕಾರ್ಲೆ
ಯುವತಿ ವಿಚಾರಕ್ಕೆ ಕಿರುಕುಳ: ಆಡಿಯೊ ರೆಕಾರ್ಡ್ ಮಾಡಿಟ್ಟು ಹಾಸನ ಯುವಕ ಸುಸೈಡ್
ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಗ್ರಾಮದ ಶಂಕರ, ದರ್ಶನ್,
ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು
ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ
ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು
ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ




