Menu

ಪ್ರಣವಾನಂದ ಶ್ರೀಗೆ ಭದ್ರತೆ ಕೋರಿ ಸ್ವಾಮೀಜಿಗಳಿಂದ ಸಿಎಂಗೆ ಮನವಿ

ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಹಾಗೂ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಭೇಟಿ

ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ

ಮನೆಯಲ್ಲೇ ಕುಳಿತು  ಸ್ವ ಉದ್ಯೋಗದ  ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ

ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.  ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ

ಕಾಂಗ್ರೆಸ್‌ನಿಂದ ಆರನೇ, ಏಳನೇ ಗ್ಯಾರಂಟಿ ಭೂಮಿ,ನೀರು: ಡಿಕೆ ಶಿವಕುಮಾರ್‌ 

ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ

ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ

ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ

ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು

‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಹಾವನೂರು ಕಾರ್ಣಿಕೋತ್ಸವ ದೈವವಾಣಿ

‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂದು ಹಾವನೂರು ಗ್ರಾಮದಲ್ಲಿ ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವದಲ್ಲಿ ಆನಂದ ಬಿಲ್ಲರ ಹೆಸರಿನ ಗೊರವಯ್ಯ ದೈವವಾಣಿ ನುಡಿದಿದ್ದಾರೆ. ‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂಬ ದೈವವಾಣಿಯನ್ನು ಪ್ರಸ್ತಕ ವರ್ಷ

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ

ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್‌ ಹೋರಿ ಸಾವು

ಕೆಡಿಎಂ ಕಿಂಗ್‌ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ.  ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು  ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು

ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ

ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ.