Menu

ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ

ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವರ್ಷದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಮಗಳ ಮೇಲೆ ಅತ್ಯಾಚಾರ

ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ

ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ

ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.

ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್

ಧಾರವಾಡದಲ್ಲಿ ಪತಿಯ ಸಾವಿನ ಆಘಾತದಿಂದ ಪತ್ನಿಯೂ ಸಾವು

ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ಪತಿಯ ಸಾವಿನ ಸುದ್ದಿ ತಿಳಿದು ಪತ್ನಿಗೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಪತಿ ಈಶ್ವರಪ್ಪಾ(79), ಪಾರ್ವತೆವ್ವಾ(74) ಮೃತ ದಂಪತಿ. ಭಾನುವಾರ ರಾತ್ರಿ 10 ಗಂಟೆ ಇಬ್ಬರೂ ಕುಳಿತು ಊಟ ಮಾಡಿದ್ದರು. ಆಗ ಏಕಾಏಕಿ ಈಶ್ವರಪ್ಪಾಗೆ ಹೃದಯಾಘಾತ ವಾಗಿ ಮೃತಪಟ್ಟಿದ್ದರು.

ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್‌ ಮುರಿದು ಒಬ್ಬನ ಸಾವು

ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್ 

ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

ಧಾರವಾಡ : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ  ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ

ವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ: ಲಾಂಛನದ ವಿನ್ಯಾಸ ಆಹ್ವಾನ

ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆಬ್ರುವರಿ 28, 2025 ರಿಂದ ಮಾರ್ಚ 03, 2025ರ ವರೆಗೆ ನಾಲ್ಕು ದಿನಗಳ ಕಾಲ ಪುಸ್ತಕ ಮೇಳವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ

ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ.  ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್   ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ