ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್. ಅಶೋಕ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪೊಲೀಸ್ ಬಂಧನದ ಸಮಯದಲ್ಲಿ ಮಹಿಳೆಯೊಬ್ಬರು ಅತ್ಯಂತ ಸಂಕಷ್ಟದ ಮತ್ತು ಅವಮಾನಕರ ಸ್ಥಿತಿಯಲ್ಲಿರುವ ದೃಶ್ಯಗಳು ಹೊರಬಂದಾಗ, ಒಂದು ಜವಾಬ್ದಾರಿಯುತ ಸರ್ಕಾರ ಸಂವೇದನಾಶೀಲತೆಯಿಂದ ಪಾರದರ್ಶಕವಾಗಿ ನ್ಯಾಯವನ್ನು ಒದಗಿಸುವ ಮಾಡಬೇಕಿತ್ತು. ಆದರೆ ಲಜೆಗೆಟ್ಟ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಹುಬ್ಬಳ್ಳಿಯಲ್ಲಿ ದಲಿತನ ಮದುವೆಯಾದ ಸಿಟ್ಟಿಗೆ ಗರ್ಭಿಣಿ ಮಗಳ ಕೊಲೆಗೈದ ತಂದೆ
ಪ್ರೀತಿಸಿ ಮದುವೆಯಾದ ಮಗಳು ಆರು ತಿಂಗಳ ಗರ್ಭಿಣಿಯಾಗಿರುವಾಗಲೇ ತಂದೆ ಕೊಲೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರುಈ ಮದುವೆಯನ್ನು
ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ
ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ
ಸಚಿವೆ ಹೆಬ್ಬಾಳ್ಕರ್ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್ ದುರಂತಕ್ಕೆ ಯುವಕ ಬಲಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ
ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್
ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ
ಹುಬ್ಬಳ್ಳಿ-ಧಾರವಾಡ ಇಆರ್‌ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ
ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್




