ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಮೊಬೈಲ್ ಕೊಡದ್ದಕ್ಕೆ ನೊಂದ ಬಾಲಕ ಆತ್ಮಹತ್ಯೆ
ಹುಬ್ಬಳ್ಳಿ ನಗರದ ಉದಯನಗರದಲ್ಲಿ ಮೊಬೈಲ್ ಕೊಡಲಿಲ್ಲವೆಂಬ ಕಾರಣಕ್ಕೆ ಬಾಲಕನೊಬ್ಬ ತಾಯಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಪ್ರೀ ಫೈರ್ ಗೇಮ್‌ನ ಚಟದಲ್ಲಿದ್ದ. ಇದನ್ನು ನೋಡಿದ ಪೋಷಕರು ಬುದ್ಧಿ ಹೇಳಿದ್ದರು. ಅದೇ ರೀತಿ ಗುರುವಾರ ರಾತ್ರಿ ಬಾಲಕನ ತಾಯಿ ಮಗನಿಗೆ ಮೊಬೈಲ್ ಗೇಮ್ ಆಡಬೇಡ ಅಂದಿದ್ದಾರೆ. ಇದಕ್ಕೆ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ ಕೋಣೆಗೆ ಹೋದ ಬಾಲಕ ತಾಯಿಯ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ
ಯೋಗೇಶ್ ಗೌಡ ಕೊಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ
ಎರಡು ವರ್ಷದ ಹಿಂದೆ ಮುಸ್ಲಿಂ ವಿವಾಹಿತನೊಂದಿಗೆ ಮಗಳು ನಾಪತ್ತೆ: ಪೊಲೀಸ್ ಆಯುಕ್ತರಿಗೆ ತಾಯಿ ದೂರು
ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಮನೆ ಖರೀದಿಗೆ ನೀಡಿದ್ದ 10 ಲಕ್ಷ ರೂ.ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಪೊಲೀಸ್‌ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ
ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್
“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ
ಹಾವೇರಿಯಲ್ಲಿ ಟ್ರ್ಯಾಕ್ಟರ್ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು
ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ
ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್
ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ. ಆದ್ದರಿಂದ ನಿರಾತಂಕವಾಗಿರಿ ಎಂದು
ಸಂಕಷ್ಟದಲ್ಲಿ ಸರ್ಕಾರ, ಜಿಲ್ಲಾಡಳಿತ ಜನರ ಜೊತೆಗಿರಲಿದೆ: ಸಚಿವ ಲಾಡ್
ಧಾರವಾಡದ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯನ್ನು ಗ್ರಾಮದ ಉದ್ದಗಲಕ್ಕೂ ಸಂಚರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ
ನೀರಿನ ವಿಚಾರಕ್ಕೆ ಸಮುದಾಯಗಳ ಮಧ್ಯೆ ಗಲಾಟೆ: ಗದಗಲ್ಲಿ 21 ಮಂದಿಯ ಬಂಧನ
ಗದಗ ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧಿಸಲಾಗಿದೆ. ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿ ಎಸ್‌ಸಿ ವ್ಯಕ್ತಿ ನೀರಿನ ಬಳಕೆ ಮಾಡಿದ ವಿಚಾರಕ್ಕೆ ಗಲಾಟೆ ನಡೆದಿತ್ತು. ಎರಡು




