ಹುಬ್ಬಳ್ಳಿ-ಧಾರವಾಡ
ಎರಡು ವರ್ಷದ ಹಿಂದೆ ಮುಸ್ಲಿಂ ವಿವಾಹಿತನೊಂದಿಗೆ ಮಗಳು ನಾಪತ್ತೆ: ಪೊಲೀಸ್ ಆಯುಕ್ತರಿಗೆ ತಾಯಿ ದೂರು
ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಮನೆ ಖರೀದಿಗೆ ನೀಡಿದ್ದ 10 ಲಕ್ಷ ರೂ.ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಪೊಲೀಸ್‌ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಪರಾರಿಯಾಗಿರುವುದಾಗಿ ಆಕೆಯ ತಾಯಿ
ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್
“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ
ಹಾವೇರಿಯಲ್ಲಿ ಟ್ರ್ಯಾಕ್ಟರ್ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು
ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ
ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್
ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ. ಆದ್ದರಿಂದ ನಿರಾತಂಕವಾಗಿರಿ ಎಂದು
ಸಂಕಷ್ಟದಲ್ಲಿ ಸರ್ಕಾರ, ಜಿಲ್ಲಾಡಳಿತ ಜನರ ಜೊತೆಗಿರಲಿದೆ: ಸಚಿವ ಲಾಡ್
ಧಾರವಾಡದ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯನ್ನು ಗ್ರಾಮದ ಉದ್ದಗಲಕ್ಕೂ ಸಂಚರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ
ನೀರಿನ ವಿಚಾರಕ್ಕೆ ಸಮುದಾಯಗಳ ಮಧ್ಯೆ ಗಲಾಟೆ: ಗದಗಲ್ಲಿ 21 ಮಂದಿಯ ಬಂಧನ
ಗದಗ ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧಿಸಲಾಗಿದೆ. ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿ ಎಸ್‌ಸಿ ವ್ಯಕ್ತಿ ನೀರಿನ ಬಳಕೆ ಮಾಡಿದ ವಿಚಾರಕ್ಕೆ ಗಲಾಟೆ ನಡೆದಿತ್ತು. ಎರಡು
ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು
ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು
ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.




