Menu

ಸಂಕಷ್ಟದಲ್ಲಿ ಸರ್ಕಾರ, ಜಿಲ್ಲಾಡಳಿತ ಜನರ ಜೊತೆಗಿರಲಿದೆ: ಸಚಿವ ಲಾಡ್‌

ಧಾರವಾಡದ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯನ್ನು ಗ್ರಾಮದ ಉದ್ದಗಲಕ್ಕೂ ಸಂಚರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್  ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ತೊಂದರೆಗೆ ಈಡಾದ ಸಾರ್ವಜನಿಕರ ಕುಂದು ಕೊರತೆಗಳನ್ನು  ವಿಚಾರಿದರು. ಹಾನಿಗೊಂಡ ಮನೆಗಳಿಗೆ ತುರ್ತು ನೆರವು ನೀಡಲು ಸಂತೋಷ್ ಲಾಡ್ ಫೌಂಡೇಶನ್ ಮುಖಾಂತರ ಗ್ರಾಮಕ್ಕೆ 50,000 ಮೇಲ್ಚಾವಣಿ ಹಂಚುಗಳು ವಿತರಿಸಲಾಗಿತ್ತು. ಇದರಿಂದ

ನೀರಿನ ವಿಚಾರಕ್ಕೆ ಸಮುದಾಯಗಳ ಮಧ್ಯೆ ಗಲಾಟೆ: ಗದಗಲ್ಲಿ 21 ಮಂದಿಯ ಬಂಧನ

ಗದಗ ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧಿಸಲಾಗಿದೆ. ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿ ಎಸ್‌ಸಿ ವ್ಯಕ್ತಿ ನೀರಿನ ಬಳಕೆ ಮಾಡಿದ ವಿಚಾರಕ್ಕೆ ಗಲಾಟೆ ನಡೆದಿತ್ತು. ಎರಡು

ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು

ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು

ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.  ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

‘ಪಿ.ಸಾಯಿನಾಥ್ ಅವರ “Every body loves good drought” ಗ್ರಾಮೀಣ ಪತ್ರಿಕೋದ್ಯದ ಬೈಬಲ್’

ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು. ಇವರು ಬರೆದಿರುವ “Every body loves good drought” ಎನ್ನುವ ಪುಸ್ತಕ “ಗ್ರಾಮೀಣ ಪತ್ರಿಕೋದ್ಯದ ಬೈಬಲ್” ಎಂದು ಕರೆಯಬಹುದು. ಈ ಪುಸ್ತಕ “ಬರ ಅಂದರೆ ಎಲ್ಲರಿಗೂ ಇಷ್ಟ” ಎಂದು

ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು ಐದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಈ ಕಾರ್ಯಾಚರಣೆ ನಡೆಸಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ

ರೈತರ ಕೃಷಿಗಾಗಿ ಪ್ರತಿದಿನ ಏಳು ಗಂಟೆ ವಿದ್ಯುತ್ ಪೂರೈಸಿ: ಸಂತೋಷ್‌ ಲಾಡ್

ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್

ಫೆ.15ರಂದು ಭಾರತ-ಪಾಕ್‌ ಕ್ರಿಕೆಟ್‌ ಪಂದ್ಯ ಯಾರೂ ವೀಕ್ಷಿಸಬೇಡಿ; ಪ್ರಮೋದ್‌ ಮುತಾಲಿಕ್‌

ಟಿ-20 ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು ಫೆ. 15 ರಂದು ಎದುರಿಸುತ್ತಿದೆ. ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ 26 ಜನ ಪ್ರಾಣ ತೆತ್ತಿದ್ದಾರೆ. ಅವರ ಮನೆಯವರ ಕಣ್ಣೀರು  ಇನ್ನೂ ಆರಿಲ್ಲ. ಹೀಗಿರುವಾಗ ಅವರ ವಿರುದ್ದ ಪಂದ್ಯ ಆಡುವುದು ಸರಿಯಲ್ಲ. ಇದು ಮೋಸದ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚೆಕ್-ಇನ್: ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಾಣೆಯೆಂದು ಹುಬ್ಬಳ್ಳಿ ಮಹಿಳೆ ದೂರು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ದುಬೈಗೆ ತೆರಳುತ್ತಿದ್ದ ಹುಬ್ಬಳ್ಳಿಯ ಮಹಿಳೆಯೊಬ್ಬರ ಲಗೇಜ್ ಬ್ಯಾಗ್‌ನಲ್ಲಿದ್ದ ಚಿನ್ನ ಮತ್ತು ವಜ್ರಾಭರಣಗಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಮಹಿಳೆ ಕಳೆದ ನವೆಂಬರ್