Saturday, October 03, 2026
Menu

ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ

ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್  ಉದ್ಘಾಟಿಸಿದರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ,

ನಾನೂ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ: ಶಾಸಕ ಯತ್ನಾಳ

ಸಿದ್ದರಾಮಯ್ಯ ಜೆಡಿಎಸ್‌ನಿಂದ ಉಚ್ಛಾಟನೆ ಆಗಿ ಸಿಎಂ ಆದರು. ಯಡಿಯೂರಪ್ಪ ಸಹ ಉಚ್ಚಾಟನೆ ಆದ ಮೇಲೆ ಸಿಎಂ ಆದವರು. ಹೀಗಾಗಿ ನಾನೂ ಸಹ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು  ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಗದಗ  ನಗರದ ಹತ್ತಕಾಳು

ಧಾರವಾಡದಲ್ಲಿ ಕ್ರೀಡಾ ಪರಿಸರ ವೃದ್ಧಿಗೆ ಅಗತ್ಯ ಕ್ರಮ: ಸಂತೋಷ್‌ ಎಸ್‌ ಲಾಡ್‌

‌ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್‌ ಎಸ್. ಲಾಡ್  ಹೇಳಿದರು. ಧಾರವಾಡ ಡಿಡಿಎಲ್‍ಟಿಎ ಆವರಣದ

ಧಾರವಾಡ ಜಿಲ್ಲೆ ಜನತಾದರ್ಶನ: ಈವರೆಗೆ ಮೂರು ಸಾವಿರ ಅರ್ಜಿ ವಿಲೇವಾರಿ ಎಂದ ಸಚಿವ ಲಾಡ್‌

ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು, ಇದು 18ನೇ ಜನತಾ ದರ್ಶನ ಕಾರ್ಯಕ್ರಮವಾಗಿದೆ. ಜನರ

ಯೋಜನಾ ವರದಿ ಧಾರವಾಡ  ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್‌

ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು

ಪ್ರಿಯಾಂಕ್‌ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು

ಪ್ರಿಯಾಂಕ್‌ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು

ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್‌.ಕೆ. ಪಾಟೀಲ

ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ

ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ: ಸಿ.ಸಿ.ಪಾಟೀಲ

ಆರ್ ಎಸ್ ಎಸ್ ಬ್ಯಾನ್ ಮಾಡಲು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಸವಾಲು ಹಾಕಿದರು. ಗದಗ  ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಧಾರವಾಡದ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತಪಟ್ಟವರು. ಗದಗ ಮೂಲದ

ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್‌ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ

ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ