Menu

ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್ ಗುಜರಾತ್‌ನ ಪೋರ್‌ ಬಂದರ್ ಸಮೀಪ ನಿಂತಿದ್ದ

ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ

ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್‌

ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್‌ಗೆ ನೂರು ವರ್ಷ ತುಂಬುತ್ತಿದೆ.

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ

ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ

ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ.  ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ