ಕಲಬುರಗಿ
ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾನಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಕಲಬುರಗಿ ವಿಮಾನ ನಿಲ್ದಾಣಲ್ಲೇ ಪ್ರಾಥಮಿಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರವಾಹ ಹಾನಿ ವಿವರಗಳನ್ನು ಪಡೆದುಕೊಂಡರು. ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ
ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ
ಪತ್ನಿಯ ಶೀಲದ ಬಗ್ಗೆ ಶಂಕೆ: ಯಾದಗಿರಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ತನ್ನ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಕೃತ್ಯ ನಡೆದಿದೆ. ಪತಿ-ಪತ್ನಿಯ ಜಗಳದಿಂದ ಅಮಾಯಕ ಮುದ್ದು ಮಕ್ಕಳ ಪ್ರಾಣ ಬಲಿಯಾಗಿದೆ. ಮಲಗಿದ್ದ ಮಕ್ಕಳ ಮೇಲೆ ತಂದೆಯಾದವ ರಾಕ್ಷಸನಂತೆ
ತಾಳಿಕೋಟಿ ಡೋಣಿ ಸೇತುವೆ ಜಲಾವೃತ: ಬೈಕ್ ಸವಾರ ನೀರುಪಾಲು
ತಾಳಿಕೋಟಿ ಪಟ್ಟಣದಲ್ಲಿ ಡೋಣಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಈ ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಡೆಯಾಗಿದೆ. ಹೀಗಿದ್ದರೂ ಸೇತುವೆಯಲ್ಲಿ ಬೈಕ್ ಚಲಾಯಿಸಿದ ಯುವಕ
ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ
ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ
ಯಡ್ರಾಮಿಯಲ್ಲಿ ಮನೆ ಗೋಡೆ ಕುಸಿದು ಮಲಗಿದ್ದ ಬಾಲಕಿ ಸಾವು
ಯಡ್ರಾಮಿ ಪಟ್ಟಣದಲ್ಲಿ ತಡ ರಾತ್ರಿ ಗೋಡೆ ಕುಸಿದು ಸಾನಿಯಾ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮಹಿಬೂಬ, ನಿಶಾದ, ಆಯಿಷಾ, ರಮಜಾನಬಿ ಗಂಭೀರ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಡ್ರಾಮಿ ಪಟ್ಟಣದ ನಿವಾಸಿ ಸೈಪನಸಾಬ ತಾಂಬೋಳಿ ಹಾಗೂ ಪತ್ನಿ ಸಿಂದಗಿಗೆ
ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ
ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ
ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ
ಮಳಖೇಡದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ
ಗಂಗಾವತಿಯಲ್ಲಿ ಬಾಕಿ ಶುಲ್ಕ ಪಾವತಿಗೆ ವಿದ್ಯಾರ್ಥಿನಿ ತಾಯಿಯ ತಾಳಿ ಪಡೆದ ಕಾಲೇಜು ಚೇರ್ಮನ್
ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್ ಡಾ. ಸಿಬಿ ಚಿನಿವಾಲ ವಿದ್ಯಾರ್ಥಿನಿಯ ಶುಲ್ಕ ಪಾವತಿಗಾಗಿ ಆಕೆಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ
ಭಾಲ್ಕಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಭಾಲ್ಕಿ ತಾಲೂಕಿನ ಮರೂರು ಬಳಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ವರು ಮಕ್ಕಳ ಜೊತೆ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮೃತಪಟ್ಟಿದ್ದರೆ ಇಬ್ಬರನ್ನು ಸ್ಥಳೀಯರು



