ಕಾರವಾರ
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ ನೆಲಸಿರುವ 14 ಪಾಕಿಸ್ತಾನ ಮೂಲದ ಮಹಿಳೆಯರು ದೀರ್ಘಾವಧಿ ವೀಸಾ ಇರುವ ಕಾರಣ ಭಟ್ಕಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಭಟ್ಕಳ ಹಾಗೂ ಪಾಕಿಸ್ತಾನದ ನಡುವೆ ಸ್ವಾತಂತ್ರ್ಯ ಪೂರ್ವದಲ್ಲೇ ವೈವಾಹಿಕ ಸಂಬಂಧಗಳು
ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್ಎನ್ಎಲ್ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್
ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ
ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ
ಕಾಸರಕೋಡದ ವಾಣಿಜ್ಯ ಬಂದರು ಯೋಜನೆ ಕೈಬಿಡಲು ಸಿಎಂಗೆ ಮೀನುಗಾರರ ಆಗ್ರಹ
ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡುವಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಪರಿಸರ ಸೂಕ್ಷ್ಮ ಕಡಲತೀರದ 5 ಕಿಲೋಮೀಟರ್ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪಥ ರಸ್ತೆ ಮತ್ತು
ದಾಂಡೇಲಿಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳ ಬಂಡಲ್ ಪತ್ತೆ
ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ನಂತೆ ಅಂದಾಜು ₹14 ಕೋಟಿ ಮೌಲ್ಯವೆಂದು ಲೆಕ್ಕಕ್ಕೆ ತೆಗೆದುಕೊಳ್ಳಬಹುದಾದ ನಕಲಿ ನೋಟುಗಳು ಸಿಕ್ಕಿವೆ. ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ನಗರ ಠಾಣೆಯ
ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ
ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ (88) ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಅವರು ಜನಪ್ರಿಯರಾಗಿದ್ದರು. 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಮಾಡಿಕೊಂಡಿದ್ದ ಅವರು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು
ಸಾಲ ಕೊಡದ ಸಿಟ್ಟಿಗೆ ಸಹಾಯಕನಿಂದಲೇ ಮೀಟರ್ ಬಡ್ಡಿ ದಂಧೆಕೋರನ ಕಿಡ್ನ್ಯಾಪ್
ಸಾಲ ಕೊಡಲಿಲ್ಲ ಎಂಬ ಕೋಪಕ್ಕೆ ಸಾಲ ಕೊಡುವ ಮೀಟರ್ ಬಡ್ಡಿ ದಂಧೆಕೋರನನ್ನೇ ಅಪಹರಿಸಿದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಡ್ಡಿ ದಂಧೆಕೋರ ಮುಂಡಗೋಡ ನಿವಾಸಿ ಜಮೀರ್ ದರ್ಗಾವಲೆಯ ಬಳಿ ಬಡ್ಡಿ ವಸೂಲಿ ಕೆಲಸ ಮಾಡುತ್ತಿದ್ದ ಖ್ವಾಜಾ ಅಪಹರಣಕಾರ. ಖ್ವಾಜಾಗೆ ಸಾಲ
ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ




