Menu

ಕೋಲಾರದಲ್ಲಿ ಗಾಂಜಾ, ಕಾರು ವಶಕ್ಕೆ ಪಡೆದು ಆರೋಪಿಗಳ ಬಂಧಿಸಿದ ಪೊಲೀಸ್‌

ಆಂಧ್ರಪ್ರದೇಶದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 10ಲಕ್ಷ ಮೌಲ್ಯದ 11ಕೆ.ಜಿ ಗಾಂಜಾ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ. ಅರುಣ್ ಕುಮಾರ್(29) ಸಂಜಯ್(23) ಗೋಕುಲ್(29) ಬಂಧಿತ ಆರೋಪಿಗಳು. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ

2027ಕ್ಕೆ ಎತ್ತಿನಹೊಳೆ ನೀರು ಕೋಲಾರಕ್ಕೆ ಹರಿಸೋದು ಸರ್ಕಾರದ ಗುರಿ: ಡಿಸಿಎಂ 

2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ

ಕೋಲಾರದ ಎಟಿಎಂ ಮುರಿದು 27 ಲಕ್ಷ ರೂ. ದರೋಡೆ

ಕೋಲಾರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಎಟಿಎಂ ಮುರಿದು ಸುಮಾರು 27 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ.

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ

Lokayukta: ಬಾರ್‌ಗಳಿಂದ ಮಾಮೂಲಿ ವಸೂಲು-ನಂಗಲಿ ಠಾಣೆ ಪಿಎಸ್‌ಐ ಲೋಕಾಯುಕ್ತ ಬಲೆಗೆ

ಬಾರ್‌ಗಳಿಂದ ಮಾಮೂಲಿ ಹಣ ವಸೂಲು ಮಾಡುತ್ತಿದ್ದ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್‌ಐ ಅರ್ಜುನ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್‌ ದಾಳಿ ನಡೆಸಿ ಠಾಣೆಯ ಸಿಬ್ಬಂದಿ ಹಾಗೂ ಪಿಎಸ್‌ಐಯನ್ನು ವಶಕ್ಕೆ ಪಡೆದು ತನಿಖೆ

ಕೋಲಾರದಲ್ಲಿ ಕಾರು ಅಪಘಾತಕ್ಕೆ ತಾಯಿ ಬಲಿ , ಮಗನ ಸ್ಥಿತಿ ಗಂಭೀರ

ಕೋಲಾರದ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಕಾರು ಅಪಘಾತಗೊಂಡು ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡಿದ್ದಾರೆ. ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ

ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ

ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಸಚಿವ ಬೈರತಿ ಸುರೇಶ್

ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್‌

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್‌ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್‌

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್​ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್​ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್