ಕೋಲಾರ
ಮನೆ ಮುಂದೆ ಆಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!
ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಗುರುವಾರ (ಅ.2) ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ
ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ
ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಪ್ರೀತಿಗೆ ಮನೆಯವರ ವಿರೋಧ: ಕೋಲಾರದ ಯುವಜೋಡಿ ಆತ್ಮಹತ್ಯೆ
ಕೋಲಾರದ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತ ವಯಸ್ಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಪ್ರೀತಿಗೆ ಎರಡೂ
ಹಣ ನೀಡಿಲ್ಲವೆಂದು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ಇಲ್ಲ
ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ದಿನದಿಂದ ಣ ನೀಡಿಲ್ಲ ಎಂಬ ಕಾರಣಕ್ಕೆ ರೋಗಿಗೆ ಶತ್ರ ಚಿಕಿತ್ಸೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೂಳೆ ಮುರಿತದಿಂದ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿಕ್ಕ ಮುನಿಯಪ್ಪ ಹಣ ನೀಡಿಲ್ಲ ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆ
ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ
ಅಕ್ರಮ ಸಂಬಂಧ ಬಯಲು: ಅತ್ತೆ ಮೇಲೆ ಹಲ್ಲೆಗೈದ ಸೊಸೆ ಮತ್ತು ಪ್ರಿಯಕರ ಅರೆಸ್ಟ್
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸೊಸೆ ಹಾಗೂ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮ್ಮಲಪಲ್ಲಿ ಗ್ರಾಮದ
ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ನಂತರದ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ
ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್ ಬಲಿ
ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ
ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ
ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ




