Menu

ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್‌ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಮತ್ತು ಜಯಶಂಕರ್ (30) ಎಂದು ಗುರುತಿಸಲಾಗಿದೆ. ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ​ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ

ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ

ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು

ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣ, ರಿಯಲ್‌ ಎಸ್ಟೇಟ್‌ಗೆ ಅವಕಾಶವಿಲ್ಲ: ಹೈಕೋರ್ಟ್‌

ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸಲು ಅವಕಾಶ ನೀಡುವುದಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ ನೀಡಿದೆ. ಕೋಲಾರದ ವೇಮಗಲ್‌ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್‌ ಹಾಗೂ ಗ್ರಾಮದ ರಸ್ತೆಯ

ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ.  ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ

ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ

ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು

ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ

ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ

ನವೆಂಬರ್‌ನಲ್ಲಿ ನಡೆಯಲಿದೆ ಬಿಜೆಪಿಯೊಳಗೆ ಕ್ರಾಂತಿ: ಭೈರತಿ ಸುರೇಶ್‌

ನವೆಂಬರ್ ತಿಂಗಳಿನಲ್ಲಿ ಕ್ರಾಂತಿ ಆಗುವುದು ಕಾಂಗ್ರೆಸ್‌ನಲ್ಲಿ ಅಲ್ಲ, ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ. ಹೀಗಾಗಿ ಅವರು ಆ ವಿಚಾರವನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಚರ್ಚಿಸಲು ವಿಷಯವಿಲ್ಲ.

ಮಾಲೂರು ಬಾರ್‌ನಲ್ಲಿ ಮಿಕ್ಸ್‌ಚರ್ ಕೊಡಲಿಲ್ಲವೆಂದು ಕ್ಯಾಷಿಯರ್‌ನ ಕೊಲೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಾರ್‌ನಲ್ಲಿ ರಾತ್ರಿ ಮದ್ಯ ಸೇವನೆಗೆ ಹೋದ ವ್ಯಕ್ತಿ ಸೈಡ್ಸ್ ನೀಡುವುದಕ್ಕೆ ಬಾರ್ ಕ್ಯಾಷಿಯರ್ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋದ ಕ್ಯಾಷಿಯರ್‌ ಮನೆಯೊಳಗೆ ಹೋಗಬೇಕು ಎನ್ನುವಷ್ಟರಲ್ಲಿ ಆತನ ಹೆಂಡತಿ-ಮಕ್ಕಳ ಕಣ್ಣೆದುರೇ ಚಾಕು

ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ

ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ‌ ಅಧ್ಯಯನ‌ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ

ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ