ಕೋಲಾರ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ. ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್
ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್
ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ
ಬಂಗಾರಪೇಟೆ: ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ
ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್
ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ
ಮನೆ ಮುಂದೆ ಆಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!
ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಗುರುವಾರ (ಅ.2) ಮನೆ ಮುಂದೆ
ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ
ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಪ್ರೀತಿಗೆ ಮನೆಯವರ ವಿರೋಧ: ಕೋಲಾರದ ಯುವಜೋಡಿ ಆತ್ಮಹತ್ಯೆ
ಕೋಲಾರದ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತ ವಯಸ್ಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಪ್ರೀತಿಗೆ ಎರಡೂ
ಹಣ ನೀಡಿಲ್ಲವೆಂದು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ಇಲ್ಲ
ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ದಿನದಿಂದ ಣ ನೀಡಿಲ್ಲ ಎಂಬ ಕಾರಣಕ್ಕೆ ರೋಗಿಗೆ ಶತ್ರ ಚಿಕಿತ್ಸೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೂಳೆ ಮುರಿತದಿಂದ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿಕ್ಕ ಮುನಿಯಪ್ಪ ಹಣ ನೀಡಿಲ್ಲ ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆ
ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ




