Tuesday, September 02, 2025
Menu

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ ಸಮಾರಂಭಕ್ಕೆ ಹೋಗಿ  ವಾಪಸಾಗುತ್ತಿ ದ್ದಾಗ ಕಾರು ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಬಿಪಿನ್ ಭೀಮಯ್ಯ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ

ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ

ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ  ರಸ್ತೆ ಬದಿಯಲ್ಲಿ

ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್‌

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್‌ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ  Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.

ನಾಗವಾರದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರಿನ ನಾಗವಾರದಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲುಸಾಮಾಜಿಕ ಜಾಲತಾಣಗಳಲ್ಲಿ ಡೆತ್

ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ

ಮಡಿಕೇರಿಯಲ್ಲಿ ಆಟವಾಡಲು ಕೆರೆಗಿಳಿದ ಬಾಲಕಿ ಸಾವು

ಕೊಡಗಿನ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೆ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬವರ 9 ವರ್ಷದ

ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ

ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ

ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ

ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ

ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ