ಮಡಿಕೇರಿ
ಮಡಿಕೇರಿಯಲ್ಲಿ ಆಟವಾಡಲು ಕೆರೆಗಿಳಿದ ಬಾಲಕಿ ಸಾವು
ಕೊಡಗಿನ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೆ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬವರ 9 ವರ್ಷದ ಮಗಳು ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದರು. ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ
ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ
ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ
ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ
ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ
ತನ್ನದೇ ಗನ್ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ
ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ