ಮಂಡ್ಯ
ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆ ಶಿವಕುಮಾರ್
“ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಮಾತನಾಡಿ, “ಅನುದಾನದ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು
ಮದ್ದೂರು: ಗಂಡ ಬರಬೇಕೆಂದು ಆಗ್ರಹಿಸಿ ಮನೆ ಮುಂದೆ ಪತ್ನಿಯ ಶವವಿಟ್ಟು ಪ್ರತಿಭಟನೆ
ಮದ್ದೂರಿನ ಹೆಮ್ಮನಹಳ್ಳಿಯ ಮನೆಯಲ್ಲಿ ಹರ್ಷಿತಾ ಎಂಬ ಮಹಿಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಮನೆ ಮುಂದೆ ಶವ ಇಟ್ಟು ಪೋಷಕರು ಧರಣಿ ನಡೆಸುತ್ತಿದ್ದಾರೆ. ಹರ್ಷಿತಾ ಶವವಾಗಿ ಪತ್ತೆಯಾದ ಬಳಿಕ ಆಕೆಯ ಪತಿ ಮತ್ತು ಕುಟುಂಬದವರು
ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ
ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ
ಮಂಡ್ಯದ ಗಾಂಧಿನಗರದಲ್ಲಿ ಹಿಂದೂ -ಮುಸ್ಲಿಮರಿಂದ ಅದ್ಧೂರಿ ಗಣೇಶ ವಿಸರ್ಜನೆ
ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದ ಬಳಿಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಪ್ರತಿಭಟನೆ, ಲಾಠಿ ಚಾರ್ಜ್ ಮೂಲಕ ಸುದ್ದಿಯಾಗಿ ರಾಜಕೀಯ ಪಕ್ಷಗಳ ಮೇಲಾಟಕ್ಕೂ ವೇದಿಕೆಯಾಗಿ ಪರಿಣಮಿಸಿತ್ತು. ಅದೇ ಮಂಡ್ಯದ ಗಾಂಧಿನಗರದಲ್ಲಿ ಜೈ ಭೀಮ್ ಗೆಳಯರ ಬಳಗದಿಂದ ಆಯೋಜಿಸಲಾಗಿದ್ದ ಗಣೇಶೋತ್ಸವದ
ಪ್ರಚೋದನಕಾರಿ ಭಾಷಣ: ಸಿಟಿ ರವಿ ವಿರುದ್ಧ ಪ್ರಕರಣ ದಾಖಲು
ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ
ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?
ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ
ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆತ: ನಾಳೆ ಮದ್ದೂರು ಬಂದ್
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದು ಎರಡೂ ಕೋಮುಗಳ ಹಲವು ಯುವಕರು ಗಾಯಗೊಂಡಿದ್ದು, ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನಾಳೆ ಅಂದರೆ ಮಂಗಳವಾರ ಕೃತ್ಯ ಖಂಡಿಸಿ ಹಿಂದೂ ಮುಖಂಡರು ಮದ್ದೂರು ಬಂದ್‌ಗೆ ಕರೆ ನೀಡಿದ್ದಾರೆ. ಮಂಗಳವಾರ ಮದ್ದೂರು
ಗಣೇಶ ವಿಸರ್ಜನೆ: ಮದ್ದೂರಲ್ಲಿ ಕಲ್ಲು ತೂರಾಟ, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ
ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ. ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ರಾಮ್ ರಹೀಂ ನಗರ ಉದ್ವಿಗ್ನಗೊಂಡಿದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ
ನೋಟಿಸ್ ಕೊಡಲು ಬಂದ ಕೋರ್ಟ್ ಸಿಬ್ಬಂದಿ ಕಣ್ಣಿಗೆ ಖಾರದಪುಡಿ ಎರಚಿದ ಮಂಡ್ಯ ಮಹಿಳೆ
ಮಂಡ್ಯದ ಕೆ.ಆರ್.ಪೇಟೆಯ ಕಾಳೇನಹಳ್ಳಿ ಗ್ರಾಮದಲ್ಲಿ ನೋಟಿಸ್ ಕೊಡಲು ಬಂದ ಕೋರ್ಟ್ ಸಿಬ್ಬಂದಿ ಕಣ್ಣಿಗೆ ಮಹಿಳೆ ಖಾರದಪುಡಿ ಎರಚಿದ ಘಟನೆ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟೀಸ್ ಕೊಡಲು ಹೋಗಿದ್ದ ಕೋರ್ಟ್ ಸಿಬ್ಬಂದಿಗೆ ಮಹಿಳೆ ಖಾರದ ಪುಡಿ ಎರಚಿರುವ ವೀಡಿಯೊ ಮೊಬೈಲ್ ನಲ್ಲಿ
ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್ ಮಾಡಿ ಪೋಸ್ಟ್ ಮಾಡಿದ ಮಗ ಪೊಲೀಸ್ ಅತಿಥಿ
ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್ಮೇಲ್ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ ಎಂಬವರು ರಾಣಿ ಐಶ್ವರ್ಯ