Menu

ದಕ್ಷಿಣಕನ್ನಡದಲ್ಲಿ ನಿರಂತರ ಮಳೆ: ಮೂರು ತಾಲೂಕಿನ ಶಾಲೆಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಉಳ್ಳಾಲ, ಬಂಟ್ವಾಳ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಮೂರು ತಾಲೂಕುಗಳ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ನೀಡಲಾಗಿದೆ. ಉಳ್ಳಾಲ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ.ಡಿ.ಭಟ್ ರಜೆ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು ಬಿರುಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ,

ಎಂಆರ್ ಪಿಎಲ್ ನಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಕಾರ್ಮಿಕರ ದುರ್ಮರಣ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್​ನ ತೈಲ ಚಲನೆ ವಿಭಾಗದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಅಸ್ವಸ್ಥರಾಗಿರುವ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ (ಟ್ಯಾಂಕ್ FB7029 A – ಡ್ರೈ ಸ್ಲಾಪ್

ಮಂಗಳೂರು ಹಿಂದೂ ಸಂಘಟನೆ ಮುಖಂಡನ ಮೊಬೈಲ್‌ನಲ್ಲಿ ನಗ್ನ ವೀಡಿಯೊಗಳು

ಮಂಗಳೂರಿನ ಹಿಂದೂ ಜಾಗರಣ ವೇದಿಕೆ ಮುಖಂಡನ ಮೊಬೈಲ್ ನಲ್ಲಿ ನಗ್ನ ಅಶ್ಲೀಲ ವೀಡಿಯೊಗಳು ಪತ್ತೆಯಾಗಿದ್ದು, ಮೂಡಬಿದಿರೆ ಪೊಲೀಸರು ಎಫ್ ಎಸ್ ಎಲ್‌ಗೆ ಕಳುಹಿಸಿದ್ದಾರೆ. ಹಿಂದೂ ಜಾಗರಣ ವೇದಿಕೆ ದ.ಕ ಜಿಲ್ಲಾ ಸಹಸಂಯೋಜಕ ಸಮೀತ್ ರಾಜ್ ಧರೆಗುಡ್ಡ ಎಂಬಾತ ವೀಡಿಯೊ ಕಾಲ್ ಗಳ

ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ: ದಿನೇಶ್ ಗುಂಡೂರಾವ್

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಂಡಿಯನ್ ರೆಡ್

Heart attack death-ಮಂಗಳೂರಿನಲ್ಲಿ ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಮಂಗಳೂರಿನ ಸುರತ್ಕಲ್ ಬಳಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18)ಮೃತಪಟ್ಟಿದ್ದಾರೆ. ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿದ್ದು, ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದರು.

Suicide Death- ಬಂಟ್ವಾಳದಲ್ಲಿ ಪ್ರೇಯಸಿಯ ಕೊಲೆಗೆ ಯತ್ನಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮಾರಿಪಳ್ಳದಲ್ಲಿ ಪ್ರಿಯತಮೆಯ ಕೊಲೆಗೆ ಯತ್ನಿಸಿದ ಬಳಿಕ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಡ್ಮಣ್ ಗ್ರಾಮದ ನಿವಾಸಿ ಸುಧೀರ್(30) ಆತ್ಮಹತ್ಯೆ ಮಾಡಿಕೊಂಡಾತ. ಆತ ದಿವ್ಯಾ ಎಂಬ ಯುವತಿಯನ್ನು 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಕೆಲವು

ರಾಜ್ಯದ ಹಲವೆಡೆ ಮುಂದುವರಿದಿದೆ ಧಾರಾಕಾರ ಮಳೆ

ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿದಿದೆ, ಮಲೆನಾಡಿನ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಒಂದೇ ರಾತ್ರಿಗೆ ತುಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಶೃಂಗೇರಿಯ ಗಾಂಧಿಮೈದಾನದ ರಸ್ತೆಯಲ್ಲಿ ನೀರು ತುಂಬಿದ್ದು, ಪೊಲೀಸರು ರಸ್ತೆ ಬಂದ್‌ಗೊಳಿಸಿ ಬ್ಯಾರಿಕೇಡ್‌ ಹಾಕಿದ್ದಾರೆ. ಶಿವಮೊಗ್ಗದ

ಮಂಗಳೂರಿನ ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನ ಎಗರಿಸಿದ ಕ್ಯಾಷಿಯರ್‌

ಮಂಗಳೂರಿನ ಸಹಕಾರಿ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡವಿಟ್ಟ ಚಿನ್ನವನ್ನು ಕ್ಯಾಷಿಯರ್ ಎಗರಿಸಿ ಬೇರೊಂದು ಬ್ಯಾಂಕ್‌ನಲ್ಲಿ ಅಡವಿಟ್ಟು ಕೋಟ್ಯಂತರ ರೂಪಾಯಿ ಸಾಲ ಪಡೆದು ಮಜಾ ಮಾಡಿ ಸಿಕ್ಕಿಬಿದ್ದಿದ್ದಾನೆ. ಶಕ್ತಿನಗರದ ಪದುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಕ್ಯಾಷಿಯರ್ ಪ್ರೀತೇಶ್ ಗ್ರಾಹಕರು ಸಾಲಕ್ಕಾಗಿ ಚಿನ್ನ ಅಡವಿಟ್ಟಾಗ

Israel-Iran crisis: ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನಗಳ ಸಂಚಾರ ವ್ಯತ್ಯಯ

ಇರಾನ್‌ ಕತಾರ್​ನಲ್ಲಿರುವ ಅಮೇರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ದೇಶಗಳು ವಾಯುಮಾರ್ಗ ಬಂದ್ ಮಾಡಿದ್ದರಿಂದ ಮಂಗಳೂರಿನಿಂದ ವಿಮಾನಗಳ ಹಾರಾಟ ವ್ಯತ್ಯಯಗೊಂಡಿದೆ. ಇರಾನ್‌ ಮತ್ತು ಇಸ್ರೇಲ್‌ ನಡುವಿನ ಕದನದಲ್ಲಿ ಮಧ್ಯೆ ಪ್ರವೇಶಿಸಿದ ಅಮೆರಿಕ ಇರಾನ್‌ನ ಪರಮಾಣು ನೆಲೆಗಳ

ಪಂಚಾಯತ್ ಸಭೆಗಳಲ್ಲಿ ತುಳು ಭಾಷೆಗೆ ನಿರ್ಬಂಧ: ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ಕರ್ನಾಟಕದ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ ವಿಧಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ನಿರ್ಬಂಧ ವಾಪಸ್‌ ಪಡೆಯಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಿಗೆ ನಿರ್ಬಂಧ ವಿಧಿಸುವಂತೆ